ಶುಕ್ರವಾರ, ಮೇ 14, 2021
29 °C

ಶೀಘ್ರದಲ್ಲೇ ನಿರ್ಧಾರ ಪ್ರಕಟ; ಜೆಡಿಯು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೀಘ್ರದಲ್ಲೇ ನಿರ್ಧಾರ ಪ್ರಕಟ; ಜೆಡಿಯು

ಪಾಟ್ನ (ಪಿಟಿಐ): ಬಿಜೆಪಿ ಮೋದಿ ಅವರನ್ನು ಮುಂಬರುವ ಲೋಕಸಭಾ ಚುನಾವಣೆಗೆ ಸಾರಥಿಯನ್ನಾಗಿ ನೇಮಕ ಮಾಡಿರುವುದರ ಬಗ್ಗೆ ಜೆಡಿಯು ಶೀಘ್ರದಲ್ಲೇ ಸೂಕ್ತ ನಿರ್ಧಾರ ಪ್ರಕಟಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ತಿಳಿಸಿದ್ದಾರೆ.ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸುತ್ತಿದ್ದೆವೆ. ಆಡ್ವಾಣಿ ಅವರು ಪಕ್ಷದ ಪ್ರಮುಖ ಸ್ಥಾನಗಳಿಗೆ ರಾಜೀನಾಮೆ ನೀಡಿರುವುದರ ಬಗ್ಗೆ ಮಾಹಿತಿ ಸಿಕ್ಕಿದೆ , ಇದು ಬಿಜೆಪಿಯ ಆಂತರಿಕ ವಿಚಾರ. ಆದರೆ ಮೋದಿ ಅವರನ್ನು ಪಕ್ಷದ ಸಾರಥಿಯನ್ನಾಗಿ ನೇಮಕ ಮಾಡಿರುವುದರ ಬಗ್ಗೆ ಶೀಘ್ರದಲ್ಲೇ ಪಕ್ಷದ ನಿಲುವನ್ನು ಪ್ರಕಟಿಸಲಾಗುವುದು ಎಂದು ನಿತೀಶ್ ಕುಮಾರ್ ತಿಳಿಸಿದರು.ರಾಜನಾಥ್ ಸಿಂಗ್ ಅವರನ್ನು  ಭೇಟಿಮಾಡಿ ರಹಸ್ಯ ಮಾತುಕತೆ ನಡೆಸಿದ್ದೀರಾ  ಎಂಬ ಪತ್ರಕರ್ತರ ಪ್ರಶ್ನೆಗೆ  `ನಾನು ಪಕ್ಷದ ರ‌್ಯಾಲಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವಾಗ ರಾಜ್‌ನಾಥ್ ಸಿಂಗ್ ಅವರನ್ನು ಭೇಟಿಯಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.