ಬುಧವಾರ, ಮೇ 12, 2021
23 °C

ಶೀಘ್ರದಲ್ಲೇ ಪಿಬಿ ರಸ್ತೆ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನಗರದ ಪಿ.ಬಿ. ರಸ್ತೆಯನ್ನು ಶೀಘ್ರದಲ್ಲೇ ವಿಸ್ತರಣೆ ಮಾಡಲಾಗುವುದು ಎಂದು ಸಚಿವ ಎಸ್.ಎ. ರವೀಂದ್ರನಾಥ್ ತಿಳಿಸಿದರು.ರಸ್ತೆ ವಿಸ್ತರಣೆಗೆ ಸಂಬಂಧಿಸಿದಂತೆ ನನ್ನ ಮೇಲೆ ಯಾವುದೇ ರಾಜಕೀಯ ಒತ್ತಡಗಳಿಲ್ಲ. ಈ ವಿಷಯದಲ್ಲಿ ನಾನು ಒತ್ತಡರಹಿತ ಮಂತ್ರಿ.ಯಾವುದೇ ಕಾರಣಕ್ಕೂ ರಸ್ತೆ ವಿಸ್ತರಣೆ ಮುಂದೂಡಲಾಗುವುದಿಲ್ಲ ಎಂದು ಅವರು ಸೋಮವಾರ ಸುದ್ದಿಗಾರರಿಗೆ ಮಾಹಿತಿ ನೀಡಿದರು.ತುಮಕೂರು, ಚಿತ್ರದುರ್ಗ, ರಾಣೇಬೆನ್ನೂರು, ಹಾವೇರಿ, ಶಿಗ್ಗಾಂವಿ ಹಾಗೂ ಇತರೆಡೆ  ರಾಷ್ಟ್ರೀಯ ಹೆದ್ದಾರಿ-4  ಬೈಪಾಸ್ ರಸ್ತೆ ಇದೆ.  ಅಲ್ಲಿ ಯಾವ  ಮಾನದಂಡ  ಆಧಾರದಲ್ಲಿ  ರಸ್ತೆ ವಿಸ್ತರಣೆ ಮಾಡಲಾಗಿದೆ ಎಂಬುದನ್ನು ಅಧ್ಯಯನ ಮಾಡಿ, ಇಲ್ಲೂ ಅದೇ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು  ಸಂಬಂಧಿಸಿದ ಅಧಿಕಾರಿಗಳಿಗೆ ಅಧ್ಯಯನ ಮಾಡಲು ಸೂಚಿಸಲಾಗಿದೆ ಎಂದರು.ರಸ್ತೆ ವಿಸ್ತರಣೆಗೆ ಯುಐಡಿಎಸ್‌ಎಸ್‌ಎಂಟಿ ಯೋಜನೆಯಡಿ ರೂ 6.5ಕೋಟಿ ಅನುದಾನ ಮೀಸಲಿದೆ. ಆದರೆ, ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿ ಗುತ್ತಿಗೆ ಪಡೆದಿರುವ ಗುತ್ತಿಗೆದಾರ ವಿಜಯಕುಮಾರ್ ಅನಾರೋಗ್ಯ ಪೀಡಿತರಾಗಿದ್ದಾರೆ.ಗುತ್ತಿಗೆದಾರರನ್ನು ಕರೆಸಿ, ಚರ್ಚಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಇದುವರೆಗೆ ಕೆಲಸ ಮಾಡದೇ ಬಿಲ್ ಪಡೆಯಲಾಗುತ್ತಿತ್ತು. ಆದರೆ, ಇನ್ನುಮುಂದೆ ಹಾಗಾಗದು, ಕೆಲಸ ಮಾಡಲೇಬೇಕು ಎಂದು ತಿಳಿಸಿದರು.

ಮಹಾನಗರ ಪಾಲಿಕೆಯಲ್ಲಿ ಈಚೆಗೆ ಪ್ರಮುಖ ಕಡತಗಳೇ ನಾಪತ್ತೆಯಾಗುತ್ತಿವೆಯಲ್ಲ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಾ ಇಲಾಖೆಗಳಲ್ಲೂ ಕಡತ ನಾಪತ್ತೆ ಪ್ರಕರಣ ಇದ್ದೇ ಇರುತ್ತದೆ.

 

ಪ್ರಕರಣಕ್ಕೆ  ಸಂಬಂಧಿಸಿದಂತೆ ಶೀಘ್ರದಲ್ಲೇ ಸಂಸದ ಜಿ.ಎಂ. ಸಿದ್ದೇಶ್ವರ ಅವರ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು ಎಂದರು.ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ 1,600 ಆಶ್ರಯ ಮನೆ ನಿರ್ಮಾಣ ಆಗುತ್ತಿದೆ. ಈ ಹಿಂದೆ 600 ಮನೆಗಳನ್ನು ಮಂಜೂರು ಮಾಡಲಾಗಿತ್ತು. ಆದರೆ, ಯಾರೂ ಮನೆಕಟ್ಟಿಕೊಳ್ಳಲು ಮುಂದೆ ಬರಲಿಲ್ಲ. ಶಿರಮಗೊಂಡನಹಳ್ಳಿ, ಆಲೂರುಹಟ್ಟಿಯಲ್ಲಿ 400 ಆಶ್ರಯಮನೆಗಳಿಗೆ ಮಂಜೂರು ಮಾಡಲಾಗಿದೆ ಎಂದು ವಿವರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.