ಶೀಘ್ರವೇ ಸಚಿವರ ಅಭಿಪ್ರಾಯ ಸಂಗ್ರಹ

ಶುಕ್ರವಾರ, ಮೇ 24, 2019
23 °C

ಶೀಘ್ರವೇ ಸಚಿವರ ಅಭಿಪ್ರಾಯ ಸಂಗ್ರಹ

Published:
Updated:

ನವದೆಹಲಿ (ಪಿಟಿಐ): ಶಿಕ್ಷಣ ಆಯೋಗ ರಚನೆಗೆ ಸಂಬಂಧಿಸಿದಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಶೀಘ್ರವೇ ವಿವಿಧ ಸಚಿವರ ಅನಿಸಿಕೆಗಳನ್ನು ಪಡೆಯಲಿದೆ. ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಶಿಕ್ಷಣ ಆಯೋಗ ರಚಿಸುವುದಾಗಿ ಘೋಷಿಸಿದ್ದರು.ಈ ಆಯೋಗವು, ಶಿಕ್ಷಣ ಕ್ಷೇತ್ರದ ಎಲ್ಲ ಆಯಾಮಗಳನ್ನೂ ಪರಿಶೀಲಿಸಿ ಸುಧಾರಣೆಗೆ ಶಿಫಾರಸು ಮಾಡಲಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಔದ್ಯೋಗಿಕ ಶಿಕ್ಷಣ ಹಾಗೂ ಕೌಶಲ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದ್ದು, ಈ ದಿಸೆಯಲ್ಲಿ ಮಹತ್ವದ ಬದಲಾವಣೆಗೆ ಸರ್ಕಾರವು ಶಿಕ್ಷಣ ಆಯೋಗ ರಚಿಸಲು ನಿರ್ಧರಿಸಿದೆ ಎಂದು ಪ್ರಧಾನಿ ಹೇಳಿದ್ದರು.ಶಿಕ್ಷಣ ಕ್ಷೇತ್ರ ಯಾವ ದಿಕ್ಕಿಗೆ ಚಲಿಸಬೇಕು, ಎಲ್ಲಿ ಹೆಚ್ಚಿನ ಗಮನ ಹರಿಸಬೇಕು- ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಆಯೋಗ ಶಿಫಾರಸು ನೀಡುವ ಸಾಧ್ಯತೆ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry