ಶಿವಮೊಗ್ಗ: ಜಿಲ್ಲೆಯಲ್ಲಿ ಕಾಣಿಸಿಕೊಳ್ಳುವ ಮಂಗನಕಾಯಿಲೆ, ಡೆಂಗ್ಯೆ, ಚಿಕನ್ಗುನ್ಯ ಸೇರಿದಂತೆ ವೈರಸ್ಗಳಿಂದ ಹರಡುವ ಕಾಯಿಲೆಗಳ ತಪಾಸಣೆಗಾಗಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಗೆ ಹೊಂದಿಕೊಂಡಂತೆ ಆರಂಭಿಸಲು ಉದ್ದೇಶಿಸಿರುವ ಆರ್ಟಿಪಿಸಿಆರ್ ಲ್ಯಾಬ್ ಕಟ್ಟಡ ನಿರ್ಮಾಣಕ್ಕಾಗಿ ್ಙ 23ಲಕ್ಷ ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರ್ ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಜಿ.ಪಂ. ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ಅಭಿವದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಉಲ್ಬಣಿಸುವ ಕುಡಿಯುವ ನೀರಿನ ಸಮಸ್ಯೆಗಳ ಇತ್ಯರ್ಥಕ್ಕೆ ಸರ್ಕಾರವು ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ್ಙ 8.33 ಲಕ್ಷ ಅನುದಾನ ಬಿಡುಗಡೆಗೊಳಿಸಿದೆ. ಅಲ್ಲದೇ, ಜಿಲ್ಲಾಧಿಕಾರಿಗಳ ಬರಪರಿಹಾರ ನಿಧಿಯಿಂದ ಪ್ರತಿಕ್ಷೇತ್ರಕ್ಕೆ 10ರಿಂದ ್ಙ 15 ಲಕ್ಷಗಳನ್ನು, ವಿಶೇಷವಾಗಿ ಶಿಕಾರಿಪುರ ತಾಲ್ಲೂಕಿಗೆ ್ಙ 20ಲಕ್ಷ ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದ ಅವರು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ಹಂತದಲ್ಲೂ ಸೂಕ್ತ ಕ್ರಮ ಕೈಗೊಳ್ಳಲು ಗ್ರಾ.ಪಂ. ಕಾರ್ಯದರ್ಶಿ ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದಕ್ಕಾಗಿ ಜಿಲ್ಲಾ ಪಂಚಾಯ್ತಿ 13ನೇ ಹಣಕಾಸು ಯೋಜನೆಯಲ್ಲಿ ್ಙ 1.77 ಕೋಟಿ ಅನುದಾನ ಬಂದಿದ್ದು, ಅದರಲ್ಲಿ ಪ್ರತಿ ಗ್ರಾಮ ಪಂಚಾಯ್ತಿಗೆ ್ಙ 50 ಸಾವಿರದಿಂದ 60 ಸಾವಿರಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಅಲ್ಲದೇ, ಇದೇ 15ರಂದು ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿಗಳಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ್ಙ 30ರಿಂದ 40 ಲಕ್ಷ ನೀಡುವಂತೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಕೆ.ಬಿ. ಅಶೋಕ್ನಾಯ್ಕ ಮಾತನಾಡಿ, ಕಳೆದ ಕೆಲವು ತಿಂಗಳುಗಳಿಂದ ಕೆಲವು ಗ್ರಾಮೀಣ ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕವಾಗಿ ಪೌಷ್ಟಿಕ ಆಹಾರ ಸರಬರಾಜು ಆಗುತ್ತಿಲ್ಲ ಎಂದ ಅವರು, ಮುಂದಿನ ಒಂದು ತಿಂಗಳ ಅವಧಿಯಲ್ಲಿ ಆಹಾರ ಸರಬರಾಜು ವ್ಯವಸ್ಥೆಯನ್ನು ಸರಿಪಡಿಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಏರ್ಪಡಿಸಿರುವ ಸರ್ಕಾರದ ಅನೇಕ ಕಾರ್ಯಕ್ರಮಗಳ ಕುರಿತು ಆಯಾ ಕ್ಷೇತ್ರದ ಜನಪ್ರತಿನಿಧಿಗಳಿಗೆ ಮಾಹಿತಿ ದೊರೆಯುತ್ತಿಲ್ಲ. ಕಾರ್ಯಕ್ರಮ ಸಂಘಟಿಸುವ ಅಧಿಕಾರಿಗಳು ಆಯಾ ಕ್ಷೇತ್ರದ ಚುನಾಯಿತ ಪ್ರತಿನಿಧಿಗಳ ಗಮನಕ್ಕೆ ತರುವಂತೆ ಜಿ.ಪಂ. ಉಪಾಧ್ಯಕ್ಷ ಎಚ್.ಬಿ. ಗಂಗಾಧರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವದ್ಧಿ ನಿಗಮ ಮತ್ತು ಅಲ್ಪಸಂಖ್ಯಾತರ ಅಭಿವದ್ಧಿ ನಿಗಮ ದಿಂದ ಗಂಗಾ ಕಲ್ಯಾಣ ಯೋಜನೆ ಅಡಿ 2 ವರ್ಷಗಳ ಹಿಂದೆ ಆಯ್ಕೆಯಾದ ಫಲಾನುಭವಿಗಳಲ್ಲಿ ಅನೇಕ ಜನರಿಗೆ ಇಂದಿನವರೆಗೂ ಕೊಳವೆ ಬಾವಿಗಳನ್ನು ಕೊರೆಸಿಕೊಟ್ಟಿರುವುದಿಲ್ಲ. ಈ ಬಗ್ಗೆ ಸಂಬಂಧಿಸಿದ ನಿಗಮಗಳ ಜಿಲ್ಲಾ ವ್ಯವಸ್ಥಾಪಕರು ತಮ್ಮ ಮೇಲಧಿಕಾರಿಗಳೊಂದಿಗೆ ಚರ್ಚಿಸಿ, ಅರ್ಹ ಫಲಾನುಭವಿಗಳಿಗೆ ಕೂಡಲೇ ಕೊಳವೆ ಬಾವಿಗಳನ್ನು ಕೊರೆಸಿಕೊಡುವಂತೆ ತಿಳಿಸಿದರು.

ಜಿ.ಪಂ. ಅಧ್ಯಕ್ಷೆ ಶುಭಾ ಕಷ್ಣಮೂರ್ತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೀತಾ ಬಿ. ಮಲ್ಲಿಕಾರ್ಜುನ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಈಶ್ವರಪ್ಪ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.