ಭಾನುವಾರ, ಮೇ 9, 2021
26 °C

ಶೀಘ್ರ ಖಾತೆಗಳ ಹಂಚಿಕೆ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಮೇಲಿನ ಹೊರೆ ಇಳಿಸುವ ಉದ್ದೇಶದಿಂದ ಅವರ ಬಳಿ ಇರುವ ಹೆಚ್ಚುವರಿ ಖಾತೆಗಳನ್ನು ಸಚಿವ ಸಂಪುಟದ ಸಹದ್ಯೋಗಿಗಳಿಗೆ ಹಂಚುವ ಚಿಂತನೆ ನಡೆದಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದರು. ಮುಖ್ಯಮಂತ್ರಿ ಬಳಿ ಸಾಕಷ್ಟು ಖಾತೆಗಳಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಳಿ ಇರುವ ಹೆಚ್ಚುವರಿ ಖಾತೆಗಳನ್ನು ಕಡಿಮೆ ಖಾತೆ ಇರುವ ಸಚಿವರುಗಳಿಗೆ ಹಂಚುವ ಉದ್ದೇಶವಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ಜತೆ ಚರ್ಚಿಸಲಾಗಿದೆ. ಕೇಂದ್ರ ನಾಯಕರ ಸೂಚನೆ ಮೇರೆಗೆ ಮಂತ್ರಿಗಳ ಬದಲಾವಣೆ ಕುರಿತಂತೆಯೂ ತೀರ್ಮಾನಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ರಾಜ್ಯದಲ್ಲಿ ಬರಗಾಲದ ಅಧ್ಯಯನಕ್ಕೆ ಬಿಜೆಪಿ ಪದಾಧಿಕಾರಿಗಳ ತಂಡ ಏ. 25ರಿಂದ 31ರವರೆಗೆ ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲಿದೆ ಎಂದು ಈಶ್ವರಪ್ಪ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.