ಶನಿವಾರ, ಮೇ 21, 2022
25 °C

ಶೀಘ್ರ ವಿಲೇವಾರಿ ನ್ಯಾಯಾಲಯಗಳ ಸ್ಥಾಪನೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರವಾಗಿ ನಡೆಸಲು ಮುಚ್ಚಿರುವ ಶೀಘ್ರ ವಿಲೇವಾರಿ ನ್ಯಾಯಾಲಯಗಳನ್ನು ಪುನರ್ ಸ್ಥಾಪಿಸಬೇಕು ಎಂದು ಕರ್ನಾಟಕ ಮಾನವ ಹಕ್ಕುಗಳ ಜನಪರ ಸಮಾಜದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರೀಟಾ ಕುಮಾರ್ ಆಗ್ರಹಿಸಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಯಾಲಯಗಳು ಮತ್ತು ನ್ಯಾಯಾಧೀಶರ ಕೊರತೆಯಿಂದಾಗಿ ಪ್ರಕರಣಗಳ ವಿಚಾರಣೆ ಸ್ಥಗಿತಗೊಂಡಿರುವ ಕಾರಣ ಅಮಾಯಕರು ಅನೇಕ ದಿನಗಳಿಂದ ಜೈಲಿನಲ್ಲಿಯೇ ಇರುವಂತಾಗಿದೆ ಎಂದರು.2013 ರ ಜೂನ್ ತಿಂಗಳಲ್ಲಿ ಒಟ್ಟು 54 ಶೀಘ್ರ ವಿಲೇವಾರಿ ನ್ಯಾಯಾಲಯಗಳನ್ನು ಮುಚ್ಚಲಾಯಿತು. ಈ ನ್ಯಾಯಾಲಯದ ನ್ಯಾಯಾಧೀಶರಿಗೆ ಬಡ್ತಿ ನೀಡಿ ಬೇರೆ ನ್ಯಾಯಾಲಯಗಳಿಗೆ ವರ್ಗಾವಣೆ ಮಾಡಲಾಗಿದೆ. ವಿವಿಧ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರೇ ಇಲ್ಲದ ಕಾರಣ ಅನೇಕ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ.ಅಮಾಯಕರು ಜಾಮೀನು ಪಡೆಯಲೂ ಆಗುತ್ತಿಲ್ಲ. ಕೂಡಲೇ ಶೀಘ್ರ ವಿಲೇವಾರಿ ನ್ಯಾಯಾಲಯಗಳನ್ನು ಪುನರ್ ಸ್ಥಾಪಿಸಿ ನ್ಯಾಯಾಧೀಶರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.