ಶುಕ್ರವಾರ, ಮೇ 14, 2021
29 °C

ಶುಕ್ಲಾಗೆ ಅಂತಿಮ ನಮನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಪುರ (ಐಎಎನ್‌ಎಸ್): ಕೇಂದ್ರದ ಮಾಜಿ ಸಚಿವ ವಿ.ಸಿ.ಶುಕ್ಲಾ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಫಾರ್ಮ್‌ಹೌಸ್‌ನಲ್ಲಿ ಬುಧವಾರ ನಡೆಯಿತು. ಛತ್ತೀಸಗಡದಲ್ಲಿ ಕಳೆದ ತಿಂಗಳ ನಕ್ಸಲರು ನಡೆಸಿದ ದಾಳಿಯಲ್ಲಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಶುಕ್ಲಾ ಮಂಗಳವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.ಶುಕ್ಲಾ ಅವರ ಬಯಕೆಯಂತೆ ರಾಧೆಶ್ಯಾಂ ಭವನದ ಫಾರ್ಮ್‌ಹೌಸ್‌ನಲ್ಲೇ  ಅಂತ್ಯಕ್ರಿಯೆ ನಡೆಸಲಾಯಿತು. ಅವರ ಮೊಮ್ಮಗ ವಿನಾಯಕ ಪಾಂಡೆ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.ಗೃಹಖಾತೆ ರಾಜ್ಯ ಸಚಿವ ಆರ್.ಪಿ.ಎನ್.ಸಿಂಗ್, ಕಾಂಗ್ರೆಸ್ ಮುಖಂಡ ಮೋತಿಲಾಲ್ ವೋರಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ದಿಗ್ವಿಜಯ್ ಸಿಂಗ್, ಬಿ.ಕೆ.ಹರಿಪ್ರಸಾದ್‌ಛತ್ತೀಸಗಡದ ರಾಜ್ಯಪಾಲ ಶೇಖರ್ ದತ್, ಮುಖ್ಯಮಂತ್ರಿ ರಮಣ್ ಸಿಂಗ್ ಅಲ್ಲದೆ ಹಲವು ಬಿಜೆಪಿ ಮುಖಂಡರೂ ಸಹ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.ಶುಕ್ಲಾ ಅವರ ಶವ ಇರಿಸಲಾಗಿದ್ದ ಗಾಂಧಿಭವನದಲ್ಲಿ ಬೆಳಿಗ್ಗೆಯಿಂದಲೇ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಮುಖಂಡರು ಅಗಮಿಸಿ ಅಂತಿಮ ನಮನ ಸಲ್ಲಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.