ಬಾಗಲಕೋಟೆ: ನವ ನಗರದ ಸಮೀಪದ ಮುಚಖಂಡಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ ಸಹಯೋಗದೊಂದಿಗೆ ನಿರ್ಮಾಣಗೊಂಡಿರುವ ನೂತನ ಶುದ್ಧ ಕುಡಿಯುವ ನೀರಿನ ಪೂರೈಕೆ ಘಟಕಕ್ಕೆ ಭಾನುವಾರ ಶಾಸಕ ಎಚ್.ವೈ.ಮೇಟಿ ಚಾಲನೆ ನೀಡಿದರು.

ಗ್ರಾಮೀಣ ಭಾಗದ ಜನರು ಅಶುದ್ಧ ನೀರು ಸೇವೆಸುತ್ತಿರುವುದನ್ನು ಮನಗಂಡ ರಾಜ್ಯ ಸರ್ಕಾರ ಗ್ರಾಮೀಣ ಭಾಗದ ಜನತೆಗೆ ಶುದ್ಧ ಕುಡಿಯುವ ನೀರು ತಲುಪಿಸಲು ಸರ್ಕಾರ ಸಂಕಲ್ಪ ಮಾಡಿದೆ ಎಂದು ಮೇಟಿ ಹೇಳಿದರು.

ಹಲವಾರು ವರ್ಷಗಳಿಂದ ಮುಚಖಂಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಬೇಕು ಎಂಬುದು ಗ್ರಾಮಸ್ಥರ ಆಶಯವಾಗಿತ್ತು. ಅದರಂತೆ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿದೆ ಎಂದರು.

ರಾಜ್ಯ ಸರ್ಕಾರ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶದಲ್ಲಿ ಅನುಷ್ಠಾನ ಮಾಡುತ್ತಿದೆ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಶಾಸಕರು ಹೇಳಿದರು.

ಮುಚಖಂಡಿ ಗ್ರಾಮಕ್ಕೆ ಇನ್ನಷ್ಟು ಸೌಲಭ್ಯ ಒದಗಿಸಲು ಶೀಘ್ರ ಕ್ರಮಕೈಗೊಳ್ಳಲಾಗುವುದು, ಗ್ರಾಮದ ಮಹಿಳೆಯರಿಗೆ ಶೌಚಾಲಯದ ಸಮಸ್ಯೆ ಇದ್ದು ತಕ್ಷಣ ಕಟ್ಟಿಸಿಕೊಡಲಾಗುವುದು ಎಂದರು.

ಶಾಸಕ ಜೆ.ಟಿ.ಪಾಟೀಲ, ಬಸವೇಶ್ವರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜಿ. ಪಾಟೀಲ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ. ಗಾಣಿಗೇರ, ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಸೌದಾಗರ, ನಾಗರಾಜ ಹದ್ಲಿ, ಆನಂದ ಜಿಗಜಿನ್ನಿ, ಮಲ್ಲಿಕಾರ್ಜುನ್ ಮೇಟಿ, ರಜಾಕ್ ಹಳ್ಳೂರ, ಸಂಜು ವಾಡಕರ, ಮುಚಖಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಈರಪ್ಪ ಹಾದಿಮನಿ, ಧರಿಯಪ್ಪ ಮುರನಾಳ, ಕೆಂಚಪ್ಪ ಶಿಕ್ಕೇರಿ, ಸಿಂಧೂರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.