ಶುಲ್ಕ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ

7

ಶುಲ್ಕ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ

Published:
Updated:

ಗುಲ್ಬರ್ಗ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶುಲ್ಕ ನೀತಿ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಎಬಿವಿಪಿ ರಾಜ್ಯ ಕಾರ್ಯದರ್ಶಿ ರಮೇಶ ಮಾತನಾಡಿ, ಸರ್ಕಾರದ ಈ ನಿರ್ಧಾರದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಿನ್ನಡೆಯಾಗಲಿದ್ದು, ಸರ್ಕಾರ ಕೂಡಲೇ ಶುಲ್ಕ ನೀತಿಯನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದರು.

ರಾಜ್ಯದ ಹಲವು ಭಾಗಗಳಲ್ಲಿ ಬಿಸಿಎಂ ವಸತಿ ನಿಲಯಗಳ ಸಂಖ್ಯೆ ವಿರಳವಾಗಿರುವುದರಿಂದ ಗ್ರಾಮೀಣ ಭಾಗದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಕುಂದು ಬರುವುದರಿಂದ ತಕ್ಷಣವೇ ಸರ್ಕಾರ ಶುಲ್ಕ ನೀತಿಯನ್ನು ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನಾನಿರತರ ನಿಯೋಗದ ಜತೆ ಚರ್ಚೆ ನಡೆಸಿದ ಸಚಿವ ನಾರಾಯಣಸ್ವಾಮಿ ಈ ವರ್ಷದ ಹಿಂದುಳಿದ  2ಎ, 3ಎ, 3ಬಿ ವಿದ್ಯಾರ್ಥಿಗಳು ಪಾವತಿಸಿರುವ ಎಲ್ಲ ಹಣವನ್ನು ಮರು ಪಾವತಿ ಮಾಡಲಾಗುತ್ತದೆ ಹಾಗೂ ಇದಕ್ಕೆ ಸಂಬಂಧಿಸಿದಂತೆ ಆದೇಶವನ್ನು ಮಾಡಲಾಗುತ್ತದೆ. ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಹಲವು ಯೋಜನೆಗಳನ್ನು ರೂಪಿಸಲಿದೆ ಎಂದು ತಿಳಿಸಿದರು.ಇದಕ್ಕೂ ಮುನ್ನ ಪ್ರತಿಭಟನಾನಿರತರು ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಿದರು.

ಮಂಜುನಾಥ ಮೀಸೆ, ರಾಜು ತಳವಾರ, ಭಾಗಣ್ಣ ಎಸ್. ಹೋತಿನಮಡಿ, ಗಂಗಾಧರ ನಾಯಕ್, ಲೋಕೇಶ,  ಶ್ರೀಶೈಲ್ ನಾಯಿಕೋಡೆ, ಮಲ್ಲಿಕಾರ್ಜುನ ಹೂಗಾರ, ವಿದ್ಯಾನಂದ ಕಾಂಬಳೆ ಮೊದಲಾದವರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry