ಭಾನುವಾರ, ಏಪ್ರಿಲ್ 11, 2021
20 °C

ಶೃಂಗೇರಿ: ನಕ್ಸಲರು ಮತ್ತೆ ಪ್ರತ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಮುಂಡಗಾರು ಲತಾ ನೇತೃತ್ವದಲ್ಲಿ ನಕ್ಸಲರು ಶೃಂಗೇರಿ ತಾಲ್ಲೂಕಿನಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ನಕ್ಸಲ್ ಚಳವಳಿ ಪ್ರವರ್ಧಮಾನಕ್ಕೆ ಬರಲು ಕಾರಣರಾದ ಸಾಕೇತ್ ರಾಜನ್ ಮಡಿದ ದಿನವಾದ ಫೆ. 13ರಿಂದ ಶೃಂಗೇರಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಮನೆಗಳಿಗೆ ನಕ್ಸಲರು ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಯಾಚಿಸಲಿದ್ದಾರೆ ಎಂಬ ಸಂಗತಿಯನ್ನು ಮೂಲಗಳು ಖಚಿತಪಡಿಸಿವೆ.ಪೊಲೀಸರು ಇದೀಗ ಬುಕಡಿಬೈಲ್ ಮತ್ತು ಮುಂಡಗಾರು ಸುತ್ತ ತೀವ್ರ ಸ್ವರೂಪದ ಶೋಧ ಕಾರ್ಯ ಆರಂಭಿಸಿದ್ದಾರೆ. ಬಹಳ ದಿನಗಳ ನಂತರ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಕಂಡುಬಂದಂತಾಗಿದೆ. ನಕ್ಸಲೀಯರ ಸಂಚಾರದ ಬಗ್ಗೆ ಈ ಹಿಂದೆಯೂ ಪೊಲೀಸರಿಗೆ ಮಾಹಿತಿ ಇದ್ದಿತು. ಆದರೆ ನಕ್ಸಲರ ಬಲಾಬಲ ಮತ್ತು ಚಲನವಲನ ಗಮನಿಸಲು ಪೊಲೀಸರು ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು ಎಂಬುದನ್ನೂ ಮೂಲಗಳು ನೆನಪಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.