ಶನಿವಾರ, ಮಾರ್ಚ್ 6, 2021
21 °C

ಶೇಷಸಾಯಿ ಇನ್ಫೊಸಿಸ್‌ನ ಕಾರ್ಯನಿರ್ವಾಹಕೇತರ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೇಷಸಾಯಿ ಇನ್ಫೊಸಿಸ್‌ನ ಕಾರ್ಯನಿರ್ವಾಹಕೇತರ ಅಧ್ಯಕ್ಷ

ನವದೆಹಲಿ (ಪಿಟಿಐ): ದೇಶದ ಎರಡನೆಯ ಅತಿ ದೊಡ್ಡ ಸಾಫ್ಟ್‌ವೇರ್‌ ಸೇವಾ ಸಂಸ್ಥೆ ಇನ್ಫೊಸಿಸ್‌ನ  ಕಾರ್ಯನಿರ್ವಾಹಕೇತರ ಅಧ್ಯಕ್ಷರಾಗಿ ಆರ್‌. ಶೇಷಸಾಯಿ ನೇಮಕಗೊಂಡಿದ್ದಾರೆ.

ಇನ್ಫೊಸಿಸ್‌ನ ನಿರ್ದೇಶಕ ಮಂಡಳಿ ಅಧ್ಯಕ್ಷ ಮತ್ತು ಸ್ವತಂತ್ರ ನಿರ್ದೇಶಕರಾಗಿದ್ದ  ಕೆ.ವಿ ಕಾಮತ್‌ ಅವರು ಬ್ರಿಕ್‌ ಬ್ಯಾಂಕ್‌ ಅಧ್ಯಕ್ಷರಾಗಿ ನೇಮಗೊಂಡಿದ್ದು, ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಅವರ ಸ್ಥಾನವನ್ನು ಶೇಷಸಾಯಿ ತುಂಬಲಿದ್ದಾರೆ ಎಂದು ಇನ್ಫೊಸಿಸ್‌ ಪ್ರಕಟಣೆ ತಿಳಿಸಿದೆ.



ಶೇಷಸಾಯಿ ಅವರು 2011ರಿಂದ ಇನ್ಫೊಸಿಸ್‌ನ ನಿರ್ದೇಶಕ ಮಂಡಳಿಯ ಸ್ವತಂತ್ರ ನಿರ್ದೇಶಕರಾಗಿದ್ದರು. ಲೆಕ್ಕಪತ್ರ ಪರಿಶೋಧನಾ ಸಮಿತಿಯ ಅಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ. ಅಶೋಕ್‌ ಲೇಲ್ಯಾಂಡ್‌ ಕಂಪೆನಿಯ ಕಾರ್ಯನಿರ್ವಾಹಕೇತರ ಉಪಾಧ್ಯಕ್ಷರಾಗಿಯೂ ಶೇಷಸಾಯಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.