ಬೆಂಗಳೂರು: ಮುಂದಿನ ವರ್ಷ ವ್ಯಾಟ್ನಲ್ಲಿ ಶೇಕಡಾ 0.5ರಷ್ಟು ಕಡಿತಗೊಳಿಸಲು ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ)ಯಲ್ಲಿ ಭಾನುವಾರ ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರಗಳು ಹೆಚ್ಚಿಸಿರುವ ತೆರಿಗೆ ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾಗಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಆದ್ದರಿಂದ, ಸರ್ಕಾರ ಅಲ್ಪಪ್ರಮಾಣದಲ್ಲಿ ವ್ಯಾಟ್ ಕಡಿತಗೊಳಿಸುವ ಬಗ್ಗೆ ಗಂಭೀರ ಪರಿಶೀಲನೆ ನಡೆಸಲಿದೆ ಎಂದರು.

ಕೈಗಾರಿಕೆಗಳು ಬೆಂಗಳೂರಿಗೆ ಸೀಮಿತವಾಗಬಾರದು. ಎಲ್ಲ ಜಿಲ್ಲೆಗಳಲ್ಲೂ ಕೈಗಾರಿಕೆಗಳ ಬೆಳವಣಿಗೆಯಾಗಬೇಕು. ಇದರಿಂದ ವಲಸೆ ತಡೆಗಟ್ಟಬಹುದು. ಬಂಡವಾಳ ಹೂಡಿಕೆ ವಿಕೇಂದ್ರೀಕರಣವಾಗಬೇಕು. ಆದ್ದರಿಂದ, ಸರ್ಕಾರ ರೂಪಿಸುವ 2014–19ರ ಕೈಗಾರಿಕಾ ನೀತಿಯಲ್ಲಿ ಬಂಡವಾಳ ಹೂಡಿಕೆ ವಿಕೇಂದ್ರೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುವುದು. ಕೈಗಾರಿಕೆಗಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸುವ ನೀತಿ ಇದಾಗಲಿದೆ ಎಂದು ತಿಳಿಸಿದರು.

ಕರ್ನಾಟಕ ತೆರಿಗೆ ವಸೂಲಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ವರ್ಷವೂ ದಕ್ಷಿಣ ಭಾರತದಲ್ಲಿ ಪ್ರಥಮ ಸ್ಥಾನದಲ್ಲಿದ್ದರೂ, ನಿರೀಕ್ಷೆಗೆ ತಕ್ಕಂತೆ ತೆರಿಗೆ ಸಂಗ್ರಹವಾಗಿಲ್ಲ. ಈ ವರ್ಷ ರೂ. 37,760 ಕೋಟಿ ತೆರಿಗೆ ಸಂಗ್ರಹಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಕಳೆದ ವರ್ಷ ರೂ.32 ಸಾವಿರ ಕೋಟಿ ತೆರಿಗೆ ಸಂಗ್ರಹಿಸಲಾಗಿತ್ತು. ಈ ವರ್ಷ ರೂ. 38 ಸಾವಿರ ಕೋಟಿ ದಾಟಬೇಕು ಎನ್ನುವುದು ಸರ್ಕಾರದ ಆಶಯ ಎಂದರು.

ಕೈಗಾರಿಕೆಗಳ ಬೆಳವಣಿಗೆಗೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಮುಖ್ಯ. ಈಗಾಗಲೇ ರಾಜ್ಯದಲ್ಲಿ ರೈಲ್ವೆ ಮಾರ್ಗಗಳನ್ನು ನಿರ್ಮಿಸಲು ರೂ. 12 ಸಾವಿರ ಕೋಟಿ ವೆಚ್ಚ ಮಾಡಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ ಉಚಿತವಾಗಿ ಜಮೀನು ನೀಡಲು ಮುಂದಾಗಿದೆ. ಜತೆಗೆ ಯೋಜನೆಯ ಶೇಕಡಾ 50ರಷ್ಟು ವೆಚ್ಚವನ್ನು ಸಹ ರಾಜ್ಯ ಸರ್ಕಾರವೇ ಭರಿಸಲಿದೆ ಎಂದರು.

ಬೆಂಗಳೂರು ನಗರವೊಂದರಲ್ಲೇ ಗುತ್ತಿಗೆದಾರರ ರೂ.2000 ಕೋಟಿ ಬಿಲ್ ಬಾಕಿ ಉಳಿದಿದೆ. ಬೆಳೆ ಸಾಲ ಮನ್ನಾ ಮಾಡಿದ್ದ ಹಿಂದಿನ ಸರ್ಕಾರ ರೂ.3500 ಕೋಟಿ ಪೈಕಿ ಕೇವಲ ರೂ. 950 ಕೋಟಿ ಮಾತ್ರ ರೈತರಿಗೆ ನೀಡಿದೆ. ಉಳಿದ ರೂ.2550 ಕೋಟಿಗಳನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಆದ್ದರಿಂದ ಮುಂದಿನ ವರ್ಷದಿಂದ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಆರ್. ಶಿವಕುಮಾರ್ ಮಾತನಾಡಿ, ಎಲ್ಲ ಜಿಲ್ಲೆಗಳಲ್ಲೂ ಮೂಲಸೌಕರ್ಯ ಕಲ್ಪಿಸಿ ಕೈಗಾರಿಕೆಗಳ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಬೇಕು ಎಂದು ಕೋರಿದರು.

ಎಫ್ಕೆಸಿಸಿಐ ಹಿರಿಯ ಉಪಾಧ್ಯಕ್ಷ ಎಸ್. ಸಂಪತ್ರಾಮನ್, ಉಪಾಧ್ಯಕ್ಷ ತಲ್ಲಂ ಆರ್. ದ್ವಾರಕನಾಥ್, ಮಾಜಿ ಅಧ್ಯಕ್ಷ ಶಿವಷಣ್ಮುಗಂ, ವಿಧಾನಪರಿಷತ್ ಸದಸ್ಯ ದಯಾನಂದರೆಡ್ಡಿ ಇದ್ದರು.

‘ಕೈಗಾರಿಕೆ ವಿರೋಧಿ ಅಲ್ಲ’
‘ನಾನು ಹಳ್ಳಿ ಹಿನ್ನೆಲೆಯಿಂದ ಬಂದವನು. ಹೀಗಾಗಿ ಕೈಗಾರಿಕೆಗಳ ಬೆಳವಣಿಗೆ ಪರ ಇಲ್ಲ ಎಂದು ಕೆಲವರು ಅಪಪ್ರಚಾರ ಮಾಡಿದ್ದಾರೆ. ಆದರೆ, ಇದು ತಪ್ಪು ಅಭಿಪ್ರಾಯ. ನಾನು ಕೈಗಾರಿಕಾ ವಿರೋಧಿ ಅಲ್ಲ.
– ಸಿದ್ದರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.