ಶೇ 86.23ರಷ್ಟು ಮಕ್ಕಳಿಗೆ ಲಸಿಕೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾನುವಾರ ಐದು ವರ್ಷದೊಳಗಿನ 5,61,074 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಶೇ 86.23ರಷ್ಟು ಸಾಧನೆ ಮಾಡಲಾಗಿದೆ.
ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನದ ಮೊದಲ ಹಂತಕ್ಕೆ ಚಾಲನೆ ನೀಡಲಾಗಿದ್ದು, 6,50,674 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
ಮೆಜೆಸ್ಟಿಕ್, ಸಿಟಿ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳು, ಮಾರುಕಟ್ಟೆ, ಜನನಿಬಿಡ ಪ್ರದೇಶಗಳಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಯಿತು.
ವೈದ್ಯರು, ನರ್ಸ್ಗಳು ಸೋಮವಾರ, ಮಂಗಳವಾರ ಮನೆಮನೆಗೆ ತೆರಳಿ ಪೋಲಿಯೊ ಲಸಿಕೆ ಹಾಕಲಿದ್ದಾರೆ. ಟೌನ್ಹಾಲ್ ಬಳಿ ಇರುವ ದಾಸಪ್ಪ ಆಸ್ಪತ್ರೆಯಲ್ಲಿ ಮಗುವಿಗೆ ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಪೋಲಿಯೊ ಹನಿ ಹಾಕಿ ನಗರದ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಚಿವರಿಂದ ಚಾಲನೆ: ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ರುಷಿತಾ ಎಂಬ ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ‘ಭಾರತ ಪೋಲಿಯೊಮುಕ್ತ ದೇಶವಾಗಿದೆ. ಆದರೆ, ಪಾಕಿಸ್ತಾನ, ಆಫ್ಘಾನಿಸ್ತಾನ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಪೋಲಿಯೊ ಜೀವಂತವಾಗಿದೆ. ಹೀಗಾಗಿ ಇನ್ನೂ ಕೆಲ ವರ್ಷಗಳ ಕಾಲ ಈ ಕಾರ್ಯಕ್ರಮವನ್ನು ಮುಂದುವರೆಸಬೇಕಾಗಿದೆ’ ಎಂದರು.
ಸೆಲ್ಫಿ ಕ್ಲಿಕ್ಕಿಸಿಕೊಂಡ ಸಚಿವರು: ಬಾಲಕಿ ರುಷಿತಾಗೆ ಪೋಲಿಯೊ ಲಸಿಕೆ ಹಾಕಿದ ಬಳಿಕ ಸಚಿವ ಯು.ಟಿ. ಖಾದರ್ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸ ಪಟ್ಟರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.