ಶಿರ್ವ:ಗ್ರಾಮೀಣ ಭಾಗದ ಶೈಕ್ಷಣಿಕ ಸಂಸ್ಥೆಯ ಅಭಿವೃದ್ಧಿಯಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ರಾಜ್ಯ ನಗರಾಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.

ಪಡುಬೆಳ್ಳೆ ನಾರಾಯಣ ಗುರು ಪ್ರೌಢ ಶಾಲೆಯ `ರಜತೋತ್ಸವ ಸಂಭ್ರಮ' ಸಮಾರಂಭವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸ್ಥಳೀಯ ಸಮಿತಿ ಕಾರ್ಯಾಧ್ಯಕ್ಷ, ಮಾಜಿ ಸಚಿವ ವಸಂತ ವಿ ಸಾಲಿಯಾನ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಾಂಬೂರು ಹೋಲಿಕ್ರಾಸ್ ಚರ್ಚ್ನ ಧರ್ಮಗುರು ರೆ. ಫಾ. ಪಾವ್ಲ್ ರೇಗೊ ಆಶೀರ್ವಚನ ನೀಡಿದರು.

ಮುಂಬಯಿ ಬಿಲ್ಲವರ ಅಸೋಸಿಯೇಶನ್ನ ಉಪಾಧ್ಯಕ್ಷ ನಿತ್ಯಾನಂದ ಡಿ ಕೊಟ್ಯಾನ್, ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ನಾಗೇಂದ್ರ ಮಧ್ಯಸ್ಥ, ಜಿಲ್ಲಾ ಪಂಚಾಯತ್ನ ಮಾಜಿ ಅಧ್ಯಕ್ಷ ಶಂಕರ ಪೂಜಾರಿ, ಸ್ಥಳೀಯ ಸಮಿತಿ ಉಪಾಧ್ಯಕ್ಷ ರಾಮಚಂದ್ರ ಕಿದಿಯೂರು, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಮಲ್ಪೆ ರಾಘವೇಂದ್ರ, ಜಿಲ್ಲಾ ಪಂಚಾಯತ್ ಸದಸ್ಯೆ ಐಡಾ ಗಿಬ್ಬ ನೊರೊನ್ಹ, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಅಶೋಕ ಸುವರ್ಣ, ಶಾಲಾ ಆಡಳಿತಾಧಿಕಾರಿ ಜಿನರಾಜ್. ಸಿ ಸಾಲಿಯಾನ್, ಕನ್ನಡ ಮಾಧ್ಯಮ ಮುಖ್ಯಶಿಕ್ಷಕಿ ಉಷಾ. ಉಪಸ್ಥಿತರಿದ್ದರು.

ಈ ಸಂದರ್ಭ ಬೆಳ್ಳಿಹಬ್ಬದ ಕಾರ್ಯಕ್ರಮಕ್ಕೆ ಪ್ರಪ್ರಥಮ ದೇಣಿಗೆ ರೂ. ಒಂದು ಲಕ್ಷ ನೀಡಿದ `ಬಿಲ್ಲವಾಸ್ ದುಬೈ'ನ ಅಧ್ಯಕ್ಷ ಜಿತೇಂದ್ರ ಸುವರ್ಣರನ್ನು ಅಭಿನಂದಿಸಲಾಯಿತು. ಸ್ಥಳೀಯ ಸಮಿತಿ ಉಪಾಧ್ಯಕ್ಷ ಜಯಶಂಕರ್ ಕುತ್ಪಾಡಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಶಿವಾಜಿ. ಎಸ್ ಸುವರ್ಣ ವಂದಿಸಿದರು. ಶಿಕ್ಷಕಿ ಅರುಂಧತಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.