ಬಳ್ಳಾರಿ: ಸರ್ಕಾರಿ ಶಾಲೆಗಳಲ್ಲಿನ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶಿಕ್ಷಣ ತಜ್ಞರು ಚಿಂತನೆ ನಡೆಸಿ ಸೂಕ್ತ ಯೋಜನೆ ರೂಪಿಸುವ ಅಗತ್ಯವಿದೆ ಎಂದು ನವ ಕರ್ನಾಟಕ ಯುವಶಕ್ತಿ ಸಂಘಟನೆಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪ್ರಭಾವತಿ ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕಪ್ಪಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶುಕ್ರವಾರ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕನ್ನಡಪರ ಸಂಘಟನೆಗಳು ಮುಂದಾಗಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಕೆಲಸವನ್ನು ಸಂಘಟನೆಗಳು ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಸೌಲಭ್ಯ ದೊರೆತಾಗ ಮಾತ್ರ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು ಗ್ರಾಮೀಣ ಭಾಗದ ಶಾಲೆಗಳಿಗೆ ಸಮರ್ಪಕ ಸೌಲಭ್ಯ ನೀಡುವತ್ತ ಗಮನ ಹರಿಸಬೇಕು ಎಂದು ರೈಲ್ವೆ ಇಲಾಖೆಯ ಮುಖ್ಯ ಪರಿವೀಕ್ಷಕ ವೀರಭದ್ರಪ್ಪ ಹೇಳಿದರು.

ಹೋಟೆಲ್ ಉದ್ಯಮಿ ವಿಜಯ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಟಿ.ಎಂ. ಗಂಗಾಧರಯ್ಯ, ವಿಭಾಗೀಯ ಉಪಾಧ್ಯಕ್ಷ ಆಸಂಗಿ ನಾಗರಾಜ್, ಮೃತ್ಯುಂಜಯ, ಪ್ರಕಾಶ್ ಮೋಕಾ, ಸತ್ಯನಾರಾಯಣ ಕೊರ್ಲ ಗುಂದಿ, ಎರ್ರುಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ಧರ್ಮಣ್ಣ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಾಧ್ಯಾಪಕ ಭೋಗಪ್ಪ ಸ್ವಾಗತಿಸಿದರು. ಚಂದ್ರಶೇಖರ ಆಚಾರ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.