ಭಾನುವಾರ, ಮೇ 16, 2021
28 °C

ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಗ್ಗಾವಿ: ಶಿಕ್ಷಣ ಕ್ಷೇತ್ರವನ್ನು ಶುದ್ಧೀಕರಿಸಿ, ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ತಾಲ್ಲೂಕು ಘಟಕದ ಕಾರ್ಯಕರ್ತರು ಮಂಗಳವಾರ ಸರ್ಕಾರಿ ಐಟಿಐ ಕಾಲೇಜು ಎದರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಎ.ಎ.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.ಹಿಂದೆ ಆಡಳಿತ ನಡೆದ ಬಿಜೆಪಿ ಸರ್ಕಾರ ಶಿಕ್ಷಣದ ವ್ಯಾಪಾರೀಕರಣ-ಖಾಸಗೀಕರಣ ಹಾಗೂ ಕೇಸರೀಕರಣವನ್ನು ತೀವ್ರಗೊಳಿಸಿ  ಶಿಕ್ಷಣ ಕ್ಷೇತ್ರವನ್ನು ಅಧೋಗತಿಗೆ ತಳ್ಳಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಹಿಂದಿನ ಸರ್ಕಾರ ಅನುಸರಿಸಿದ ತಪ್ಪು ನೀತಿಗಳನ್ನು ಕೈಬಿಟ್ಟು ವಿದ್ಯಾರ್ಥಿ-ಶಿಕ್ಷಕರ ಪರವಾದ ನೀತಿಗಳನ್ನು ಜಾರಿಗೊಳಿಸಿ ಕ್ಷೇತ್ರವನ್ನು ಶುದ್ಧೀಕರಿಸಬೇಕು ಎಂದು ಆಗ್ರಹಿಸಿದರು.ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ನಾಯಿಕೊಡೆಗಳಂತೆ ಬೆಳೆಯುತ್ತಿದ್ದು, ಅಲ್ಲಿನ ಡೊನೇಷನ್ ಹಾವಳಿಯನ್ನು ನಿಯಂತ್ರಿಸಲು ಜಿಲ್ಲಾಧಿಕಾರಿಗಳ  ನೇತೃತ್ವದಲ್ಲಿ ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ ರಚನೆ ಮಾಡಬೇಕು.ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ನೀಡುವ ಜೊತೆಗೆ ಅವುಗಳ ಆರಂಭಕ್ಕೆ ಅವಕಾಶ ಕಲ್ಪಿಸಬೇಕೇ ಹೊರತು ಮುಚ್ಚುವ ಹುನ್ನಾರ ಕೈಬಿಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.ಎಸ್‌ಎಫ್‌ಐ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಷ್ ಮಾದರ, ಕಾರ್ಯದರ್ಶಿ ಮಲ್ಲೇಶ  ಗೋಟನವರ, ಮಂಜು ಕಾಳೆ, ಜೋತಿ ದೊಡ್ಮನಿ, ಶೃತಿ ಮುದ್ರಗಣಿ, ಪರಶುರಾಮ. ಎನ್, ಈರಣ್ಣ ಕೂರವರ, ವೀರಯ್ಯ ಹಿರೇಮಠ, ಪ್ರಶಾಂತ ಇಂಗಳಗಿ, ಕೃಷ್ಣ, ದೇವರಾಜ ಸೇರಿದಂತೆ ಅನೇಕ ಎಸ್‌ಎಫ್‌ಐ ಕಾರ್ಯಕರ್ತರು  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.