ಮಂಗಳವಾರ, ಮಾರ್ಚ್ 2, 2021
31 °C
ನಂಜುಂಡಪ್ಪ ವರದಿ ಅನುಷ್ಠಾನದ ನೋಡಲ್ ಅಧಿಕಾರಿ ಭೇಟಿ

ಶೌಚಾಲಯಗಳೇ ಗೋದಾಮು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೌಚಾಲಯಗಳೇ ಗೋದಾಮು

ಹನುಮಸಾಗರ: ನಂಜುಂಡಪ್ಪ ವರದಿಯನ್ವಯ ರಾಜ್ಯದಲ್ಲಿ ಅತ್ಯಂತ ಹಿಂದುಳಿದ 39 ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಅಧಿಕಾರಿಗಳು ಆಯಾ ತಾಲ್ಲೂಕುಗಳಿಗೆ ಭೇಟಿ ನೀಡಿ ವಿವಿಧ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ನೋಡಲ್ ಅಧಿಕಾರಿ  ಎಚ್.ಎಸ್.ಸತೀಶಬಾಬು ಹೇಳಿದರು.ಕುಡಿಯುವ ನೀರು, ಶೌಚಾಲಯ, ಶಿಕ್ಷಣ, ಆರೋಗ್ಯ ಸೇವೆ, ಇನ್ನಿತರ ಸೌಲಭ್ಯಗಳ ಬಗ್ಗೆ ಮತ್ತು ಈ ಭಾಗದ ವಾಣಿಜ್ಯ ಬೆಳೆಗಳು, ತೋಟಗಾರಿಕಾ ಬೆಳೆಗಳು, ಮಾನವ ಸಂಪನ್ಮೂಲ ಇನ್ನಿತರ ವಿಷಯಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತದೆ.ಸರ್ಕಾರದ ವಿವಿಧ ಯೋಜನೆಗಳಾದ ಕ್ಷೀರಭಾಗ್ಯ, ಅನ್ನಭಾಗ್ಯ ಮುಂತಾದ ಯೋಜನೆಗಳು ಅನುಷ್ಠಾನಗೊಂಡಿವೆಯೇ ಎಂಬುದನ್ನು ತಿಳಿದುಕೊಳ್ಳಲಾಗುತ್ತದೆ ಎಂದರು. ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಹಾಗೂ ಸಮಸ್ಯೆಗಳ ಪರಿಹಾರಕ್ಕೆ  ಕೈಗೊಳ್ಳಬಹುದಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರೊಂದಿಗೆ ಚರ್ಚಿಸಿ ಸಮಗ್ರ ವರದಿಯನ್ನು ಸರ್ಕಾರಕ್ಕೆ  ಸಲ್ಲಿಸಲಾಗುವುದು ಎಂದು ತಿಳಿಸಿದರು.ವಿವಿಧ ಗ್ರಾಮಗಳಿಗೆ ತೆರಳಿ ಪರಿಶೀಲನೆ ನಡೆಸಿದಾಗ ಚರಂಡಿಗಳ ಅವ್ಯವಸ್ಥೆ, ನೈರ್ಮಲ್ಯದ ವ್ಯವಸ್ಥೆ ಕಂಡು ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದಾಗ ಮಕ್ಕಳಲ್ಲಿ ಅಪೌಷ್ಠಿಕತೆ ಇದ್ದುದು ಕಂಡು ಬಂತು. ಸರ್ಕಾರದ ಅನುದಾನದಲ್ಲಿ ನಿರ್ಮಾಣ ಮಾಡಿಕೊಂಡಿರುವ ಶೌಚಾಲಯಗಳನ್ನು ನಿರುಪಯುಕ್ತ ಸಾಮಗ್ರಿಗಳನ್ನು ಸಂಗ್ರಹಿಸುವ ಕೋಣೆಗಳಾಗಿವೆ. ಈ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡುವಂತೆ ತಿಳಿಸಿದರು.ಕೃಷ್ಣಾ ಬಿ ಸ್ಕೀಂನ ಕೊಪ್ಪಳ ಏತ ನೀರಾವರಿ ಯೋಜನೆಯನ್ನು ತ್ವರಿತಗತಿಯಲ್ಲಿ ಮುಗಿಸುವುದು. ಆಲಮಟ್ಟಿಯ ಕೃಷ್ಣಾ ನೀರಿನಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, 371(ಜೆ) ಕಲಂನ್ನು ಸಮರ್ಪಕವಾಗಿ ಜಾರಿಗೆ ತರುವುದು, ಹೈದರಾಬಾದ್ ಕರ್ನಾಟಕ ವಾಸಸ್ಥಳ ಪ್ರಮಾಣ ಪತ್ರ ನೀಡಿಕೆಯಲ್ಲಿ ತೊಂದರೆಗಳನ್ನು ನಿವಾರಿಸುವುದು ಸೇರಿದಂತೆ ಹಲvu ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು. ಕಂದಾಯ ನಿರೀಕ್ಷಕ ಮಹಮ್ಮದ್ ಮುಸ್ತಾಫ್ ಹಾಗೂ ಆರ್.ಆಂಜನೇಯ, ಕೃಷ್ಣ ಪತ್ತಾರ, ಮಹಾಂತಯ್ಯ ಕೋಮಾರಿ ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.