ಗುರುವಾರ , ಜೂನ್ 17, 2021
22 °C

ಶೌಚಾಲಯ ನಿರ್ಮಾಣ ಕಡ್ಡಾಯ: ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್.ನಗರ: `ಪ್ರತಿಯೊಬ್ಬರು ಆರೋಗ್ಯವಾಗಿರಲು ತಮ್ಮ ಮನೆಗಳಲ್ಲಿ ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಳ್ಳುವುದು ಅವಶ್ಯ~ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.ಪಟ್ಟಣದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಈಚೆಗೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಆರೋಗ್ಯ ಜನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೆಲವು ಗ್ರಾಮಗಳಲ್ಲಿ ಜನಪ್ರತಿನಿಧಿಗಳ ಮನೆಯಲ್ಲಿಯೇ ಶೌಚಾಲಯ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಶೌಚಾಲಯಕ್ಕಾಗಿ ಬಯಲು ಪ್ರದೇಶ ಅವಲಂಬಿಸಿದರೆ ಗ್ರಾಮದ ಜನತೆಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಈ ಬಗ್ಗೆ ಅಧಿಕಾರಿಗಳು ಪ್ರತಿ ಗ್ರಾಮಗಳಲ್ಲೂ ಸಭೆ ನಡೆಸಿ ತಿಳಿವಳಿಕೆ ಮೂಡಿಸಬೇಕು ಎಂದರು.ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಗಳು ಎಲ್ಲರಿಗೂ ಎಲ್ಲಾ ಸೌಲಭ್ಯ ಒದಗಿಸಲು ಸಾಧ್ಯವಿಲ್ಲ. ಸರ್ಕಾರ ಒದಗಿಸುವ ಅಭಿವೃದ್ಧಿ ಕೆಲಸಗಳು ಅನುಷ್ಠಾನಗೊಳ್ಳಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದರು.ವಿಧಾನ ಪರಿಷತ್ ಸದಸ್ಯ ತೋಂಟದಾರ್ಯ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯಗಳ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಸರ್ಕಾರಗಳು ನೀಡುತ್ತಿರುವ ಅನುದಾನ ಸಾಲುತ್ತಿಲ್ಲ. ಇದರಿಂದ ಗ್ರಾಮಾಂತರ ಪ್ರದೇಶಗಳಲ್ಲಿನ ಸಮಸ್ಯೆಗಳು ಉಲ್ಬಣಗೊಳ್ಳಲು ಕಾರಣವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.ಜಿ.ಪಂ. ಸದಸ್ಯ ರಾಜಯ್ಯ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಟಿ. ಶಿವಪ್ರಸಾದ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥಾಪಕ ಡಾ.ಆರ್. ಬಾಲಸುಬ್ರಹ್ಮಣ್ಯ ಮಾತನಾಡಿದರು. ತಾ.ಪಂ ಅಧ್ಯಕ್ಷೆ ಎಂ.ಜೆ. ಹೇಮಾವತಿ, ಉಪಾಧ್ಯಕ್ಷ ಮೇಲೂರು ಕೃಷ್ಣೇಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗಣ್ಣ, ಸದಸ್ಯರಾದ ರಮ್ಯ, ಲಕ್ಷ್ಮೀ, ರಾಮಪ್ಪ, ಮಿರ್ಲೆ ಸೀತಾರಾಮ್, ಜಾನಕಮ್ಮ, ಪುರಸಭೆ ಸದಸ್ಯೆ ರತ್ನಮ್ಮ ಜಯರಾಮ್, ಮುಖಂಡರಾದ ಹೆಬ್ಬಾಳ್ ಸುಜಯ್, ಉಮೇಶ್, ಆರೋಗ್ಯ ಶಿಕ್ಷಣ ಅಧಿಕಾರಿ ಮಿರ್ಲೆ ಲೋಕನಾಥ್, ಶಿಶು ಅಭಿವೃದ್ಧಿ ಸಹಾಯಕ ಯೋಜನಾಧಿಕಾರಿ ನೀಲಾಂಬಿಕ ಇತರರು ಇರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.