ಶನಿವಾರ, ಮೇ 15, 2021
24 °C

ಶ್ರೀಕಂಠೇಶ್ವರ ಬ್ರಹ್ಮರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ಪಟ್ಟಣದ ಹೊರ ವಲಯದಲ್ಲಿನ ಪುಂಗನೂರು ಕ್ರಾಸ್ ಸಮೀಪ ಶುಕ್ರವಾರ ಪ್ರಸನ್ನ ಪಾರ್ವತಿ ಸಮೇತ ಶ್ರೀಕಂಠೇಶ್ವರಸ್ವಾಮಿ ಬ್ರಹ್ಮರಥೋತ್ಸವ ಏರ್ಪಡಿಸಲಾಗಿತ್ತು. ಉತ್ಸವಕ್ಕೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಚಾಲನೆ ನೀಡಿದರು.ರಥೋತ್ಸವದ ಅಂಗವಾಗಿ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಎಪಿಎಂಸಿ ಅಧ್ಯಕ್ಷ ಎಂ.ಶ್ರೀನಿವಾಸನ್, ತಾ.ಪಂ.ಮಾಜಿ ಸದಸ್ಯ ರಾಜಶೇಖರರೆಡ್ಡಿ, ದೇವಾಲಯದ ಕಾರ್ಯದರ್ಶಿ ಎಂ.ಶ್ರೀರಾಮರೆಡ್ಡಿ, ಸಂಚಾಲಕ ವೈ.ಆರ್.ಶಿವಪ್ರಕಾಶ್, ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಲಿಂಗಯ್ಯ ಉಪಸ್ಥಿತರಿದ್ದರು.ತಾಲ್ಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ಕೆ.ಮೋಹನಾಚಾರಿ ಕಳಶ ಸ್ಥಾಪನೆ ಮಾಡಿದರು. ಅರ್ಚಕರಾದ ಅಶ್ವತ್ಥನಾರಾಯಣ ಶಾಸ್ತ್ರಿ, ಸತೀಶ್ ಶಾಸ್ತ್ರಿ ಧಾರ್ಮಿಕ ವಿಧಿ ನೆರವೇರಿಸಿದರು.ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಕೋದಂಡರಾಮಸ್ವಾಮಿ ರಥೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಸಿ.ಆರ್.ರಾಘವೇಂದ್ರರೆಡ್ಡಿ ಉತ್ತಮ ರಾಸುಗಳಿಗೆ ಬಹುಮಾನ ವಿತರಿಸಿದರು. ಜಾತ್ರೆಯಲ್ಲಿ ಭಾಗವಹಿಸಿದ್ದ ಜನರಿಗೆ ಅನ್ನಸಂತರ್ಪಣೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್, ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉತ್ಸವದಲ್ಲಿ ಭಾಗವಹಿಸಿದ್ದರು. ಶ್ಯಾಗತ್ತೂರು ಗ್ರಾಮದಲ್ಲಿ ಕರಗ ಮಹೋತ್ಸವ ಏರ್ಪಡಿಸಲಾಗಿತ್ತು. ಶೀಗಹಳ್ಳಿ ಗ್ರಾಮದಲ್ಲಿ ವಾದ್ಯಗೋಷ್ಠಿ ನಡೆಸಲಾಯಿತು.ಕಲ್ಲೂರು ಗ್ರಾಮದಲ್ಲಿ ಈಶ್ವರ ಬ್ರಹ್ಮರಥೋತ್ಸವ ಏರ್ಪಡಿಸಲಾಗಿತ್ತು. ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ರಥೋತ್ಸವಕ್ಕೆ ಚಾಲನೆ ನೀಡಿದರು. ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್, ಕಾಂಗ್ರೆಸ್ ಮುಖಂಡ ಕೆ.ಆರ್.ಕೃಷ್ಣಮೂರ್ತಿ ಭಾಗವಹಿಸಿದ್ದರು.

ದಳಸನೂರು ಗ್ರಾಮದಲ್ಲಿ ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವ ಏರ್ಪಡಿಸಲಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.