ಭಾನುವಾರ, ಮೇ 9, 2021
26 °C

ಶ್ರೀನಿವಾಸ ರೆಡ್ಡಿ ಬಳ್ಳಾರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಐಎಎನ್‌ಎಸ್): ಆಂಧ್ರದ ಅನಂತ್‌ಪುರಂ ಜಿಲ್ಲೆಯಲ್ಲಿ  ವಶಪಡಿಸಿಕೊಳ್ಳಲಾದ 4.9 ಕೋಟಿ ರೂ ಮೊತ್ತದ ಭಾರಿ ಹಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಓಬಳಾಪುರಂ ಗಣಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ಬಳ್ಳಾರಿಗೆ ಕರೆ ತಂದಿದೆ.ಈ ಸಂಬಂಧ ಬಂಧಿತರಾಗಿರುವ ಇಬ್ಬರು ವ್ಯಕ್ತಿಗಳು ವಶಪಡಿಸಿಕೊಳ್ಳಲಾದ ಭಾರಿ ಮೊತ್ತದ ಹಣವು ಶ್ರೀನಿವಾಸ ರೆಡ್ಡಿ ಅವರಿಗೆ ಸೇರಿದ್ದು ಎಂದು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. 

ಬಳ್ಳಾರಿಯಲ್ಲಿನ ಶ್ರೀನಿವಾಸ ರೆಡ್ಡಿ ಅವರಿಗೆ ಸಂಬಂಧಿಸಿದ ಬ್ಯಾಂಕ್ ಖಾತೆಗಳ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ ಎಂದ ಮೂಲಗಳು ತಿಳಿಸಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.