ಗುರುವಾರ , ಜೂನ್ 24, 2021
23 °C

ಶ್ರೀರಾಮುಲು ಸೇರ್ಪಡೆಗೆ ಸುಷ್ಮಾ ಅತೃಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಬಿಎಸ್‌ಆರ್‌ ಕಾಂಗ್ರೆಸ್‌ ಅಧ್ಯಕ್ಷ ಬಿ. ಶ್ರೀರಾಮುಲು ಅವರನ್ನು ಮರಳಿ ಬಿಜೆಪಿಗೆ ಕರೆತಂದಿರುವುದಕ್ಕೆ ಪಕ್ಷದ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.‘ನನ್ನ ತೀವ್ರ ವಿರೋಧದ ನಡುವೆಯೂ ಶ್ರೀರಾಮುಲು ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲಾಗಿದೆ ಎಂಬುದನ್ನು ಈ ಮೂಲಕ ಸ್ಪಷ್ಟಪಡಿಸುವೆ’ ಎಂದು ಸುಷ್ಮಾ ಶುಕ್ರವಾರ ರಾತ್ರಿ ಟ್ವೀಟ್‌ ಮಾಡಿದ್ದಾರೆ. ಗಣಿ ಹಗರಣದಲ್ಲಿ ಆರೋಪಿಗಳಾದ ರೆಡ್ಡಿ ಸಹೋದರರ ಆಪ್ತರಾದ ಶ್ರೀರಾಮುಲು ಅವರನ್ನು ಬಿಜೆಪಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಸಿದ್ಧತೆ ನಡೆಸಿದೆ.‘ಕಳಂಕಿತ’ ನಾಯಕರು ಪಕ್ಷಕ್ಕೆ ಸೇರ್ಪಡೆಯಾಗುವುದಕ್ಕೆ ತಮ್ಮ ವಿರೋಧ ಇದೆ ಎಂದು ಸ್ವರಾಜ್‌ ಈಚೆಗೆ ಪಕ್ಷದ ಅಧ್ಯಕ್ಷ ರಾಜನಾಥ್‌ ಸಿಂಗ್‌ ಅವರಿಗೆ ಪತ್ರ ಬರೆದಿದ್ದರು. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶ್ರೀರಾಮುಲು ‘ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧೆಗೆ ಬಿಜೆಪಿ ನಾಯಕರಿಂದ ಭರವಸೆ ಸಿಕ್ಕಿದೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.