ಶ್ರೀಲಂಕಾ ಮೀನುಗಾರರ ಪ್ರತಿಭಟನೆ

7

ಶ್ರೀಲಂಕಾ ಮೀನುಗಾರರ ಪ್ರತಿಭಟನೆ

Published:
Updated:

ಕೊಲೊಂಬೊ (ಪಿಟಿಐ): ಭಾರತೀಯ ಮೀನುಗಾರರು ಶ್ರೀಲಂಕಾದ ಜಲ ಪ್ರದೇಶಕ್ಕೆ ಪ್ರವೇಶಿಸದಂತೆ ತಡೆಯಬೇಕು ಎಂದು ಆಗ್ರಹಿಸಿ ಅಲ್ಲಿನ ಮೀನುಗಾರರು ಉತ್ತರ ಜಾಫ್ನಾದ ಭಾರತೀಯ ದೂತವಾಸದ ಎದುರು ಬಾಯಿಗೆ ಬಟ್ಟೆ ಕಟ್ಟಿಕೊಂಡು ಮೌನ ಸೋಮವಾರ ಪ್ರತಿಭಟನೆ ನಡೆಸಿದರು.ಭಾರತೀಯ ಮೀನುಗಾರರು ಶ್ರೀಲಂಕಾಕ್ಕೆ ಸೇರಿದ ಜಲ ಪ್ರದೇಶದಲ್ಲಿ ಅಕ್ರಮವಾಗಿ ಪ್ರವೇಶಿಸಿ ಮೀನುಗಳನ್ನು ಹಿಡಿಯುತ್ತಿದ್ದಾರೆ. ಇದರಿಂದ ಲಂಕಾದ ಮೀನುಗಾರರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಮೀನುಗಾರರ ಅಕ್ರಮ ಪ್ರವೇಶವನ್ನು ತಡೆಯಲು ಅಧಿಕಾರಿಗಳು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry