ಶ್ರೀಲಂಕಾ ಸಚಿವರಿಗೆ ಕರೆ ಮಾಡಿದ ಕೃಷ್ಣ

7

ಶ್ರೀಲಂಕಾ ಸಚಿವರಿಗೆ ಕರೆ ಮಾಡಿದ ಕೃಷ್ಣ

Published:
Updated:

ನವದೆಹಲಿ (ಐಎಎನ್‌ಎಸ್): ಬಂಧಿತರಾಗಿರುವ ಭಾರತೀಯ ಮೀನುಗಾರರ ಬಿಡುಗಡೆಗೆ ಶ್ರೀಲಂಕಾ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವ ವಿಶ್ವಾಸವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಎಂ.ಕೃಷ್ಣ ವ್ಯಕ್ತಪಡಿಸಿದ್ದಾರೆ.ಗುರುವಾರ ಶ್ರೀಲಂಕಾದ ತಮ್ಮ ಸಹವರ್ತಿ ಜಿ.ಎಲ್.ಪೆರಿಸ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಕೃಷ್ಣ, ಬಂಧಿತ ಭಾರತೀಯ ಮೀನುಗಾರರ ಬಿಡುಗಡೆಗೆ ಶ್ರೀಲಂಕಾ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು.ಸಮಸ್ಯೆಯನ್ನು ಎರಡೂ ಸರ್ಕಾರಗಳು ಸೌಹಾರ್ದಯುತವಾಗಿ ಬಗೆ ಹರಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ನಂತರ ಅವರು ಸುದ್ದಿಗಾರರಿಗೆ ತಿಳಿಸಿದರು.

ಕಳೆದ ಕೆಲವು ದಿನಗಳಿಂದ ಶ್ರೀಲಂಕಾದ ನೌಕಾಪಡೆ ‘ಅಕ್ರಮ ಮೀನುಗಾರಿಕೆ’ ಆರೋಪದ ಮೇಲೆ 142 ಭಾರತೀಯ ಮೀನುಗಾರರನ್ನು ಬಂಧಿಸಿದೆ. ಶ್ರೀಲಂಕಾದ ಈ ಕ್ರಮಕ್ಕೆ ತಮಿಳುನಾಡಿನಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry