ಶ್ರೀಲಕ್ಷ್ಮಿಗೆ ಮಧ್ಯಂತರ ಜಾಮೀನು: ವಿಚಾರಣೆ ಮುಂದಕ್ಕೆ

7

ಶ್ರೀಲಕ್ಷ್ಮಿಗೆ ಮಧ್ಯಂತರ ಜಾಮೀನು: ವಿಚಾರಣೆ ಮುಂದಕ್ಕೆ

Published:
Updated:

ನವದೆಹಲಿ (ಪಿಟಿಐ): ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಯಾಗಿರುವ ಆಂಧ್ರಪ್ರದೇಶದ ಹಿರಿಯ ಐಎಎಸ್ ಅಧಿಕಾರಿಯಾಗಿರುವ ವೈ. ಶ್ರೀಲಕ್ಷ್ಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಈ ತಿಂಗಳ 27ಕ್ಕೆ ಮುಂದೂಡಿದೆ.

ಲಕ್ಷ್ಮಿ  ಸಲ್ಲಿಸಿದ್ದ ಜಾಮೀನು ಅರ್ಜಿ ವಿರೋಧಿಸಿ ಸಿಬಿಐ ನೀಡಿರುವ ಪ್ರತಿಕ್ರಿಯೆಗಳನ್ನು ಪರಿಶೀಲಿಸಿ ಆ ಬಳಿಕ ಸೂಕ್ತ ಆದೇಶ ನೀಡುವುದಾಗಿ ನ್ಯಾಯಮೂರ್ತಿಗಳಾದ ಎಚ್.ಎಲ್. ದತ್ತು, ಸಿ.ಕೆ. ಪ್ರಸಾದ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry