ಗುರುವಾರ , ನವೆಂಬರ್ 21, 2019
20 °C

ಶ್ರೀಶಾಂತ್ ಉತ್ತಮ ಫಾರ್ಮ್‌ನಲ್ಲಿದ್ದಾರೆ: ಓವೇಸ್

Published:
Updated:

ಜೈಪುರ (ಪಿಟಿಐ): `ರಾಜಸ್ತಾನ ರಾಯಲ್ಸ್ ತಂಡದ ಬೌಲರ್ ಶ್ರೀಶಾಂತ್ ಈಗ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಟೂರ್ನಿಯಲ್ಲಿ ಬೌಲಿಂಗ್ ಮಾಡಲು ಅವರು ಸಿದ್ಧರಾಗಿದ್ದಾರೆ'. ಹೀಗೆಂದು ರಾಯಲ್ಸ್ ತಂಡದ ಬ್ಯಾಟ್ಸ್‌ಮನ್ ಓವೇಸ್ ಷಾ ಶನಿವಾರ ಇಲ್ಲಿ ಹೇಳಿದರು.2008ರ `ಕೆನ್ನೆಗೆ ಹೊಡೆದ ಪ್ರಕರಣ'ವನ್ನು ಕೆದಕಿ ಮತ್ತೆ ವಿವಾದಕ್ಕೆ ಗುರಿಯಾಗಿದ್ದ ಶ್ರೀಶಾಂತ್, ಭಾನುವಾರ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆಡಲು ಮಾನಸಿಕವಾಗಿ ಸಿದ್ಧರಾಗಿದ್ದಾರಾ ಎಂದು ಸುದ್ದಿಗಾರರು ಷಾ ಅವರನ್ನು ಕೇಳಿದರು. ಇದಕ್ಕೆ ಉತ್ತರಿಸಿದ ಷಾ, `ಶ್ರೀಶಾಂತ್ ಬಗ್ಗೆ ಜನ ಈ ರೀತಿ ಆಲೋಚಿಸುತ್ತಾರೆ ಎಂದರೆ ಆಶ್ಚರ್ಯವಾಗುತ್ತದೆ. ಅವರು ಒಬ್ಬ ವೃತ್ತಿಪರ ಕ್ರಿಕೆಟಿಗ. ನೆಟ್‌ನಲ್ಲಿ ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಚೆನ್ನಾಗಿ ಬೌಲಿಂಗ್ ಮಾಡುತ್ತಿದ್ದಾರೆ' ಎಂದು ಹೇಳಿದರು.

 ಒಂದು ವೇಳೆ ತಂಡಕ್ಕೆ ಆಯ್ಕೆಯಾದರೆ ತಮ್ಮ ಸಂಪೂರ್ಣ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ' ಎಂದು ಹೇಳಿದರು.

ಪ್ರತಿಕ್ರಿಯಿಸಿ (+)