ಶನಿವಾರ, ಮೇ 15, 2021
26 °C

ಶ್ರೀಶಾಂತ್ ಮೇಲೆ ಮೊಕಾ ಹೇರಿಕೆ, ಜಾಮೀನು ನಿರಾಕರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಬಂಧಿತ ಕ್ರಿಕೆಟಿಗ ಶ್ರೀಶಾಂತ ಹಾಗೂ ಇತರ 22 ಮಂದಿಯ  ಮೇಲೆ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಮೊಕಾ- ಎಂಸಿಒಸಿಎ) ಯನ್ನು ಪೊಲೀಸರು ಹೇರಿದ್ದು, ನ್ಯಾಯಾಲಯವು ಮಂಗಳವಾರ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಇದೇ ತಿಂಗಳ 18ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿದೆಭೂಗತ ಜಗತ್ತಿನ ದಾವೂದ್ ಇಬ್ರಾಹಿಂ ಹಾಗೂ ಛೋಟಾ ಶಕೀಲ್ ಅವರೊಂದಿಗೆ ಸೇರಿ ಆರೋಪಿಗಳು ಸಂಘಟಿತ ಅಪರಾಧ ಕೃತ್ಯಗಳನ್ನು ಎಸಗಿರುವುದರಿಂದ ಅವರ ಮೇಲೆ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯ (ಮೊಕಾ-ಎಂಸಿಒಸಿಎ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.ಇದೇ ವೇಳೆ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಲೋಕೇಶ್‌ಕುಮಾರ್ ಅವರು ಸಂಘಟಿತ ಅಪರಾಧಗಳನ್ನು ತಡೆಯಲು ಮೊಕಾ ಕಾಯಿದೆಯು ಪೊಲೀಸರಿಗೆ ಆರೋಪಿಗಳ ಕಸ್ಟಡಿ ವಿಚಾರಣೆಗೆ ಇನ್ನಷ್ಟು ಕಾಲಾವಕಾಶ ನೀಡುತ್ತದೆ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.