ಷೇರುಪೇಟೆಯಲ್ಲಿ ಗರಿಷ್ಠ ಏರಿಳಿತ ನಿರೀಕ್ಷೆ

ಬುಧವಾರ, ಮೇ 22, 2019
32 °C

ಷೇರುಪೇಟೆಯಲ್ಲಿ ಗರಿಷ್ಠ ಏರಿಳಿತ ನಿರೀಕ್ಷೆ

Published:
Updated:

ನವದೆಹಲಿ (ಪಿಟಿಐ):  ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ರೂಪಾಯಿ ಅಪಮೌಲ್ಯ ಈ ವಾರ ಮುಂಬೈ ಷೇರುಪೇಟೆಯಲ್ಲಿ ಗರಿಷ್ಠ ಮಟ್ಟದ ಏರಿಳಿತಗಳನ್ನು ಸೃಷ್ಟಿಸುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಡಾಲರ್ ಎದುರು ರೂಪಾಯಿ ಮೌಲ್ಯ ದಿನೇ ದಿನೇ ಕುಸಿಯುತ್ತಿದೆ.  ಆಮದು ಕ್ಷೇತ್ರಕ್ಕೆ ಸಂಬಂಧಿಸಿದ ವಹಿವಾಟುಗಳಲ್ಲಿ ಹಣ ತೊಡಗಿಸಿದವರು ಇದರಿಂದ ಹೆಚ್ಚಿನ ನಷ್ಟ ಅನುಭವಿಸತ್ತಿದ್ದಾರೆ.ಇನ್ನೊಂದೆಡೆ ವಿದೇಶಿ ಸಾಂಸ್ಥಿಕ ಹೂಡಿಕೆದಾರರಿಂದ ಡಾಲರ್ ಬೇಡಿಕೆ ಹೆಚ್ಚಾಗಿದ್ದು, ಚಿನ್ನ- ಬೆಳ್ಳಿ ಮೇಲಿನ ಹೂಡಿಕೆಯೂ ಕಡಿಮೆಯಾಗುತ್ತಿದೆ. ಈ ಎಲ್ಲ ಸಂಗತಿಗಳು ವಹಿವಾಟಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು `ಐಐಎಫ್‌ಎಲ್~ನ ಸಂಶೋಧನಾ ಮುಖ್ಯಸ್ಥ ಅಮರ್ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ.ದೇಶದ ಆಂತರಿಕ ಪರಿಸ್ಥಿತಿಗಳು ಸುಧಾರಿಸಿರಬಹುದು. ಆದರೆ, ಜಾಗತಿಕ ಒತ್ತಡಗಳು ನಿರಂತರವಾಗಿ ಕಾಡುತ್ತಿವೆ. ಭಾರತ, ಚೀನಾ ಉತ್ತಮ ಸ್ಥಿತಿಯಲ್ಲಿ ಇದ್ದರೂ, ಯೂರೋಪ್, ಅಮೆರಿಕದ ಬಿಕ್ಕಟ್ಟಿನ ಪರಿಣಾಮಗಳನ್ನು ಎದುರಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.ಅಲ್ಪಾವಧಿ ಪರಿಣಾಮಗಳು ಗಂಭೀರ ಸ್ವರೂಪದ ನಷ್ಟವನ್ನು ಉಂಟು ಮಾಡುತ್ತವೆ. ಇದಕ್ಕೆ ಕಳೆದ ವಾರದ ವಹಿವಾಟು  ಉತ್ತಮ ಉದಾಹರಣೆ. ವಾರಾಂತ್ಯದಲ್ಲಿ ಸೂಚ್ಯಂಕ ಒಟ್ಟು 772 ಅಂಶಗಳಷ್ಟು ಕುಸಿತ ಕಂಡಿದೆ. ಹೂಡಿಕೆದಾರರ ಸಂಪತ್ತು ಗಣನೀಯವಾಗಿ ಕರಗಿದೆ ಎಂದು ಮೋತಿಲಾಲ್ ಓಸ್ವಾಲ್ ಸೆಕ್ಯುರಿಟೀಸ್‌ನ ಉಪಾಧ್ಯಕ್ಷ ಪರಾಗ್ ಡಾಕ್ಟರ್ ಪ್ರತಿಕ್ರಿಯಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry