ಸಂಕಲ್ಪ ರಥಯಾತ್ರೆಗೆ ಪಂಜಿನ ಸ್ವಾಗತ

7

ಸಂಕಲ್ಪ ರಥಯಾತ್ರೆಗೆ ಪಂಜಿನ ಸ್ವಾಗತ

Published:
Updated:

ಕೋಲಾರ:  ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಹಮ್ಮಿಕೊಂಡಿ ರುವ ಭ್ರಷ್ಟಾಚಾರ ಮುಕ್ತ ಭಾರತ ಸಂಕಲ್ಪ ರಥಯಾತ್ರೆಗೆ ಸಂಘಟನೆಯ ಜಿಲ್ಲಾ ಘಟಕದ ಪ್ರಮುಖರು ನಗರದಲ್ಲಿ ಸೋಮವಾರ ಸಂಜೆ ಮಂಜಿನ ಮೆರವಣಿಗೆ ಮೂಲಕ ಸ್ವಾಗತ ಕೋರಿದರು.ಸಂಜೆ 6.30ಕ್ಕೆ ನಗರ ಪ್ರವೇಶಿಸಿದ ರಥಯಾತ್ರೆಯನ್ನು ಸ್ವಾಗತಿಸಿದ ಪ್ರಮುಖರು ಮತ್ತು ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಪಂಜಿನ ಮೆರವಣಿಗೆ ನಡೆಸಿದರು. ಹೊಸ ಬಸ್ ನಿಲ್ದಾಣದಲ್ಲಿ ಶುರುವಾದ ಮೆರವಣಿಗೆ ಕಾಳಮ್ಮ ಗುಡಿ ಬೀದಿ ವೃತ್ತ, ಎಂ.ಜಿ.ರಸ್ತೆ ಮೂಲಕ ಗಾಂಧಿವನಕ್ಕೆ ತೆರಳಿ ಮುಕ್ತಾಯಗೊಂಡಿತು.ನಂತರ ನಡೆದ ಬಹಿರಂಗ ಸಭೆಯಲ್ಲಿ ಎಬಿವಿಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಕೆ.ಎನ್.ರಘುನಂದನ್ ಮತ್ತು ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಎನ್.ರವಿಕುಮಾರ್ ಮಾತನಾಡಿದರು. ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಸಲುವಾಗಿಯೇ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಭ್ರಷ್ಟಾಚಾರದ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಜಾತಿ, ಮತ, ಪಕ್ಷ ಭೇದವಿಲ್ಲದೆ ಎಲ್ಲರೂ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.ಸಂಘಟನಾ ಕಾರ್ಯದರ್ಶಿ ಎನ್.ಎಚ್.ಕೇದಾರನಾಥ್‌ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry