ಬೆಂಗಳೂರು: ಉತ್ತರಾಖಂಡದ ಪ್ರವಾಹದಲ್ಲಿ ರಾಜ್ಯದ 537 ಸಂತ್ರಸ್ತರು ಇನ್ನೂ ಸಿಕ್ಕಿ ಬಿದ್ದಿದ್ದಾರೆ. ಅಲ್ಲಿದ್ದ 1,355 ಯಾತ್ರಾರ್ಥಿಗಳಲ್ಲಿ ಈಗಾಗಲೇ 818 ಮಂದಿಯನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕಳುಹಿಸಲಾಗಿದೆ. ಉಳಿದವರನ್ನು ಸ್ಥಳಾಂತರಿಸಬೇಕಿದೆ ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್.ಎಂ.ಆನಂದಪ್ಪ ತಿಳಿಸಿದ್ದಾರೆ.

ರಾಜ್ಯದ ಸಂತ್ರಸ್ತರ ಕುರಿತ ಮಾಹಿತಿಯನ್ನು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆಯ ಸಹಾಯವಾಣಿಗೆ ನೀಡಬೇಕು. ಪ್ರವಾಹದಲ್ಲಿ ಸಿಲುಕಿರುವ ಸಂತ್ರಸ್ತರ ವೈಯಕ್ತಿಕ ವಿವರಗಳನ್ನು ಕ್ರೋಡೀಕರಿಸಿ, ಉತ್ತರಾಖಂಡ ಸರ್ಕಾರ ಹಾಗೂ ರಾಜ್ಯದ ಉನ್ನತ ಮಟ್ಟದ ಅಧಿಕಾರಿಗಳ ತಂಡಕ್ಕೆ ಕಳುಹಿಸಲಾಗುವುದು. ಇದರಿಂದ ಯಾತ್ರಾರ್ಥಿಗಳ ರಕ್ಷಣಾ ಕಾರ್ಯಕ್ಕೆ ಅನುಕೂಲವಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗಾಗಿ, ಅಧಿಕಾರಿ ತಂಡದಲ್ಲಿರುವ ಪ್ರದೀಪ್ ಸಿಂಗ್ ಖರೋಲಾ (ಮೊಬೈಲ್ ಸಂಖ್ಯೆ: 94490 30920), ನವೀನ್ ರಾಜ್ ಸಿಂಗ್ (94484 56789), ಪಂಕಜ್ಕುಮಾರ್ ಪಾಂಡೆ (9900095440) ಹಾಗೂ ಹೇಮಂತ್ ನಿಂಬಾಳ್ಕರ್ (9448110100) ಅವರನ್ನು ಸಂಪರ್ಕಿಸಬೇಕು. ಸಹಾಯವಾಣಿಗೆ ದೂರವಾಣಿ ಸಂಖ್ಯೆ: 080 2225 3707, 080-1070. ಇ-ಮೇಲ್ ವಿಳಾಸ: secyreliefrev@ karnataka.gov.in,secy.dm@gmail.com ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.

ಕಾರ್ಯಾಚರಣೆಗೆ ಅಡ್ಡಿಯಾದ ಮಂಜು: ಉತ್ತರಾಖಂಡದ ಪ್ರವಾಹದಲ್ಲಿ ಸಿಲುಕಿರುವ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆಗೆ ಹವಾಮಾನ ವೈಪರೀತ್ಯ ಪ್ರತಿಕೂಲ ಪರಿಣಾಮ ಬೀರುತ್ತಿದೆ.

ಮಂಜಿನಿಂದಾಗಿ ಹೆಲಿಕಾಪ್ಟರ್ ಕಾರ್ಯಾಚರಣೆ ವಿಳಂಬವಾಗುತ್ತಿದೆ. ಗುಡ್ಡ ಮತ್ತು ವಿದ್ಯುತ್ ಕಂಬ, ವೈರ್ಗಳಿರುವುದರಿಂದ ಹೆಲಿಕಾಪ್ಟರ್ ಕಾರ್ಯಾಚರಣೆ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.

`ರಾಜ್ಯದ ಎಲ್ಲ ಸಂತ್ರಸ್ತರನ್ನು ರಕ್ಷಿಸಲು ಇನ್ನೂ ಕನಿಷ್ಠ ನಾಲ್ಕೈದು ದಿನಗಳು ಬೇಕಾಗುತ್ತದೆ. ಮಳೆಯಾದರೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ. ಆದರೆ, ಸಂತ್ರಸ್ತರಿಗೆ ಆಹಾರ, ನೀರಿನ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ಮಂಜು ಕವಿಯುತ್ತಿರುವುದರಿಂದ ರಕ್ಷಣಾ ಕಾರ್ಯ ತಡವಾಗಬಹುದು' ಎಂದು ಋಷಿಕೇಶದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮಂಗಳವಾರ `ಪ್ರಜಾವಾಣಿ'ಗೆ ತಿಳಿಸಿದರು.

ವಾರ್ತಾ ಸಚಿವರ ಭೇಟಿ: ಕರ್ನಾಟಕದ ಯಾತ್ರಿಕರು ಹೆಚ್ಚಾಗಿ ಸಿಲುಕಿಕೊಂಡಿರುವ ಬದರಿನಾಥದಲ್ಲಿ ಮಳೆ ಸುರಿಯುತ್ತಿದೆ. ಅದರ ನಡುವೆಯೇ ರಾಜ್ಯದ ಮೂಲಸೌಲಭ್ಯ ಮತ್ತು ವಾರ್ತಾ ಸಚಿವ ಸಂತೋಷ್ ಲಾಡ್ ಅವರು ಸೋಮವಾರ ಹೆಲಿಕಾಪ್ಟರ್ ಸಹಾಯದಿಂದ ಅಲ್ಲಿಗೆ ತೆರಳಿ 150ಕ್ಕೂ ಹೆಚ್ಚು ಕನ್ನಡಿಗರನ್ನು ಭೇಟಿ ಮಾಡಿದರು. ಆತ್ಮಸ್ಥೈರ್ಯ ತುಂಬಿ, ಸುರಕ್ಷಿತವಾಗಿ ಸ್ಥಳಾಂತರಿಸುವ ಭರವಸೆ ನೀಡಿದರು.

ಎರಡು ದಿನಗಳಿಂದ ಮತ್ತೆ ಸುರಿಯುತ್ತಿರುವ ಮಳೆಯಿಂದಾಗಿ ಪರಿಹಾರ ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಒಂದೆರಡು ದಿನಗಳಲ್ಲಿ ಹವಾಮಾನದಲ್ಲಿ ಸುಧಾರಣೆಯಾಗುವ ಸೂಚನೆಗಳಿವೆ. ರಾಜ್ಯದ ಯಾತ್ರಿಕರಿಗೆ ತಾತ್ಕಾಲಿಕವಾಗಿ ವಸತಿ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಆರೋಗ್ಯ ಶಿಬಿರ ಸ್ಥಾಪಿಸಲಾಗಿದೆ. ಯಾತ್ರಿಗಳು ಮಾನಸಿಕವಾಗಿ ಕುಗ್ಗಿದ್ದರೂ, ಅವರ ಆರೋಗ್ಯವು ಸ್ಥಿರವಾಗಿದೆ. ರಾತ್ರಿ ಹೆಚ್ಚು ಚಳಿಯಿಂದ ಕೂಡಿರುವ ಇಲ್ಲಿನ ಹವಾಮಾನಕ್ಕೆ ಒಗ್ಗಿಕೊಳ್ಳಲು ಕಷ್ಟ ಪಡುತ್ತಿದ್ದಾರೆ. ಅವರೆಲ್ಲ ಸುರಕ್ಷಿತ ಸ್ಥಳಗಳಲ್ಲಿದ್ದಾರೆ ಎಂದು ಲಾಡ್ ಉತ್ತರಾಖಂಡದಿಂದ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.