ಸಂಕ್ಷಿಪ್ತ ಬೆಂಗಳೂರು ಸುದ್ದಿಗಳು

7

ಸಂಕ್ಷಿಪ್ತ ಬೆಂಗಳೂರು ಸುದ್ದಿಗಳು

Published:
Updated:

ಜಾರಕಿಹೊಳಿಗೆ ಹೆಚ್ಚುವರಿ ಹೊಣೆ

ಬೆಂಗಳೂರು:
ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೆಚ್ಚುವರಿಯಾಗಿ ಕರ್ನಾಟಕ ನಗರ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (ಕೆಯುಐಡಿಎಫ್‌ಸಿ) ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಉಸ್ತುವಾರಿಯನ್ನೂ ವಹಿಸಲಾಗಿದೆ.ಇದುವರೆಗೂ ಈ ಸಂಸ್ಥೆಗಳ ಉಸ್ತುವಾರಿಯನ್ನು ಜಲಮಂಡಳಿ ಸಚಿವ ಎಸ್.ಸುರೇಶಕುಮಾರ್ ಅವರು ನೋಡಿಕೊಳ್ಳುತ್ತಿದ್ದರು.ಡಾ. ರಂಗಸ್ವಾಮಿ ಬೆಂಗಳೂರು ವಿವಿ ಹಂಗಾಮಿ ಕುಲಪತಿ

ಬೆಂಗಳೂರು:
ಬೆಂಗಳೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯನ್ನಾಗಿ ಡಾ.ಎನ್.ರಂಗಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಪಾಲಿಕೆ ಅಭಿಯಾನ

ಬೆಂಗಳೂರು:
ನಗರದಲ್ಲಿ ಡೆಂಗೆ ಮತ್ತಿತರ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮಹಾನಗರ ಪಾಲಿಕೆ ಅಭಿಯಾನ ಆರಂಭಿಸಿದೆ. ಸೊಳ್ಳೆ ಉತ್ಪತ್ತಿ ತಾಣಗಳಿಗೆ ಔಷಧ ಸಿಂಪಡಿಸಲಾಗುತ್ತದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry