ಗುರುವಾರ , ಮೇ 19, 2022
21 °C

ಸಂಕ್ಷೀಪ್ತ ರಾಷ್ಟ್ರೀಯ ಸುದ್ದಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪರಿಸರ ಇಲಾಖೆ ಅನುಮತಿ ನಿರಾಕರಣೆ

ನವದೆಹಲಿ, (ಪಿಟಿಐ):
ಲವಾಸಾ ಕಾರ್ಪೊರೇಷನ್ ಪುಣೆ ಬಳಿ ನಿರ್ಮಿಸಲು ಉದ್ದೇಶಿಸಿರುವ ಮಹತ್ವಾಕಾಂಕ್ಷೆಯ `ಕಣಿವೆ ನಗರ~ ಯೋಜನೆಯ ಪ್ರಥಮ ಹಂತಕ್ಕೆ ಪರಿಸರ ಅನುಮತಿ ನೀಡಲು ಪರಿಸರ ಸಚಿವಾಲಯ ನಿರಾಕರಿಸಿದೆ.3000 ಕೋಟಿ ರೂಪಾಯಿ ವೆಚ್ಚದ ಈ ಯೋಜನೆ ಕುರಿತು ಮಹಾರಾಷ್ಟ್ರ ಸರ್ಕಾರದ ಮಾಹಿತಿ ಹಾಗೂ ಮುಂಬೈ ಹೈಕೋರ್ಟ್ ಅಂತಿಮ ಆದೇಶದ ಮೇರೆಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.ಆಹಾರ ಭದ್ರತಾ ಯೋಜನೆ ಏಕಕಾಲದಲ್ಲಿ ಜಾರಿ

ನವದೆಹಲಿ:
ಯುಪಿಎ ಸರ್ಕಾರದ ಉದ್ದೇಶಿತ ರಾಷ್ಟ್ರೀಯ ಆಹಾರ ಭದ್ರತಾ (ಎನ್‌ಎಫ್‌ಎಸ್) ಯೋಜನೆಯು ದೇಶದಾದ್ಯಂತ ಏಕಕಾಲದಲ್ಲಿ ಜಾರಿಯಾಗಲಿದೆ. ಬಡವರಿಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಒದಗಿಸುವ ಈ ಯೋಜನೆಯು ಮೊದಲ 10 ವರ್ಷಗಳ ಕಾಲ ನಿರಂತರವಾಗಿ ನಡೆಯಲಿದೆ.ಯೋಜನೆಯನ್ನು ಆಯ್ದ ಜಿಲ್ಲೆಗಳಲ್ಲಿ ಪೈಲಟ್ ಯೋಜನೆಯಾಗಿ ಜಾರಿಗೆ ತರಲು ಯೋಜನಾ ಆಯೋಗ ಹಾಗೂ ಕೇಂದ್ರ ಹಣಕಾಸು ಸಚಿವಾಲಯ ಉದ್ದೇಶಿಸಿವೆ. ಆದರೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶದಾದ್ಯಂತ ಏಕಕಾಲದಲ್ಲಿ ಜಾರಿಗೊಳಿಸಲು ಬಯಸಿದ್ದಾರೆ.ಭದ್ರತೆ ಮಾರ್ಗಸೂಚಿ: ರಾಜ್ಯಗಳ ಪ್ರತಿಕ್ರಿಯೆ ಕೇಳಿದ ಕೋರ್ಟ್

ನವದೆಹಲಿ (ಪಿಟಿಐ):
ಅತಿ ಗಣ್ಯ ವ್ಯಕ್ತಿಗಳ ಭದ್ರತೆಯ ಮಾರ್ಗಸೂಚಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಪ್ರತಿಕ್ರಿಯೆ ಕೇಳಿದೆ. ಅನರ್ಹ ವ್ಯಕ್ತಿಗಳೂ ಈ ಸೌಲಭ್ಯ ಪಡೆಯುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಈ ಸೂಚನೆ ನೀಡಿದೆ.ನ್ಯಾಯಮೂರ್ತಿಗಳಾದ ಜಿ.ಎಸ್.ಸಿಂಘ್ವಿ ಹಾಗೂ ಎಸ್.ಜೆ.ಮುಖ್ಯೋಪಾಧ್ಯಾಯ ಅವರನ್ನು ಒಳಗೊಂಡ ಪೀಠ ಸಂಬಂಧಪಟ್ಟ ಸರ್ಕಾರಗಳಿಗೆ ಈ ಸಂಬಂಧ ನೋಟಿಸ್ ಜಾರಿ ಮಾಡಿ, ಮುಂದಿನ ವಿಚಾರಣೆಯನ್ನು ಡಿ.7ಕ್ಕೆ ನಿಗದಿ ಮಾಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.