ಸಂಗಣ್ಣ ಗೆಲುವಿಗೆ ಶ್ರಮಿಸಲು ಮನವಿ

7

ಸಂಗಣ್ಣ ಗೆಲುವಿಗೆ ಶ್ರಮಿಸಲು ಮನವಿ

Published:
Updated:
ಸಂಗಣ್ಣ ಗೆಲುವಿಗೆ ಶ್ರಮಿಸಲು ಮನವಿ

ಕೊಪ್ಪಳ: ಪಕ್ಷದ ಅಭ್ಯರ್ಥಿ ಸಂಗಣ್ಣ ಕರಡಿ ಅವರನ್ನು 20ರಿಂದ 25 ಸಾವಿರ ಮತಗಳ ಅಂತರಿಂದ ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದರು.ಅವರು ನಗರದ ಗವಿಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಕಳೆದ ಐದಾರು ದಿನಗಳಿಂದ ನಿಮ್ಮ ಕ್ಷೇತ್ರದಲ್ಲಿ ಪಕ್ಷದ ನಾಯಕರು ಸಂಚರಿಸಿದ್ದಾರೆ. ಮನೆ-ಮನೆಗೆ ತೆರಳಿ ಮತ ಯಾಚನೆ ಮಾಡಲಾಗಿದೆ. ಈ ಶ್ರಮವೆಲ್ಲಾ ಸಾರ್ಥಕವಾಗಬೇಕು ಎಂದರೆ ಸಂಗಣ್ಣ ಕರಡಿ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದರು.ಕೊಪ್ಪಳ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.ಸಂಸದ ಅನಂತಕುಮಾರ್ ಸಹ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಸಚಿವರಾದ ಸಿ.ಎಂ.ಉದಾಸಿ, ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ,  ವಿ.ಸೋಮಣ್ಣ, ಸಂಸದ ಶಿವರಾಮಗೌಡ, ಶಾಸಕ ಪರಣ್ಣ ಮುನವಳ್ಳಿ ಮತ್ತಿತರರು ವೇದಿಕೆ ಮೇಲೆ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry