ಶನಿವಾರ, ಜನವರಿ 18, 2020
20 °C

ಸಂಗೀತ ವಿ.ವಿ ವ್ಯಾಪ್ತಿಗೆ ಚಿತ್ರಕಲಾ ಮಹಾವಿದ್ಯಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸದ್ಯ ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಚಿತ್ರಕಲಾ ಮಹಾವಿದ್ಯಾಲಯಗಳನ್ನು ಹೊಸದಾಗಿ ಸ್ಥಾಪನೆಯಾಗಿರುವ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದ್ದು, ರಾಜ್ಯದಲ್ಲಿನ ಎಲ್ಲ ಚಿತ್ರಕಲಾ ಮಹಾವಿದ್ಯಾಲಯಗಳ ಶೈಕ್ಷಣಿಕ ಮತ್ತು ಪರೀಕ್ಷಾ ಕಾರ್ಯಗಳ ಜವಾಬ್ದಾರಿಯನ್ನು ಮೈಸೂರಿನಲ್ಲಿರುವ ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ನೋಡಿಕೊಳ್ಳಲಿದೆ.ಚಿತ್ರಕಲಾ ಮಹಾವಿದ್ಯಾಲಯಗಳ ವಸ್ತು ವಿಷಯವು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯಕ್ಕೆ ಸೇರುವುದರಿಂದ ಈ ಬದಲಾವಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಚಿತ್ರಕಲಾ ಮಹಾವಿದ್ಯಾಲಯಗಳಿಗೂ ಇದು ಅನ್ವಯವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಪ್ರತಿಕ್ರಿಯಿಸಿ (+)