ಬೆಂಗಳೂರು: ಸುಪ್ರೀಂಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು, ಶ್ರೀರಾಮಸೇನೆ ಮತ್ತು ಭಜರಂಗದಳ ಸಂಘಟನೆಗಳನ್ನು ತಕ್ಷಣ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

`ಗೂಂಡಾಗಳು ಭೂಷಣ್ ಅವರ ಮೇಲೆ ನಡೆಸಿದ ಹಲ್ಲೆ ಹೇಡಿತನದ ಕೃತ್ಯವಾಗಿದೆ. ಸಮಾಜಘಾತುಕ ಶಕ್ತಿಗಳ ವಿರುದ್ಧ ಹೋರಾಟ ನಡೆಸುತ್ತಿರುವ ವ್ಯಕ್ತಿಗಳಿಗೆ ಸರ್ಕಾರ ಸೂಕ್ತ ಭದ್ರತೆ ನೀಡಬೇಕು. ನೆರೆಯ ಕೆಲವು ದೇಶಗಳಂತೆ ಭಾರತವೂ ಧಾರ್ಮಿಕ ಮೂಲಭೂತವಾದಕ್ಕೆ ಸಿಲುಕುವುದನ್ನು ಜನತೆ ಒಪ್ಪುವುದಿಲ್ಲ~ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಈ ಕುರಿತು ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದೇವೇಗೌಡರು, `ಕರ್ನಾಟಕದ ಚರ್ಚ್ಗಳ ಮೇಲೆ 2008ರಲ್ಲಿ ದಾಳಿ ನಡೆದ ಸಂದರ್ಭದಲ್ಲೇ ಭಜರಂಗದಳ ಮತ್ತು ಶ್ರೀರಾಮಸೇನೆಯಂತಹ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಮನವಿ ಸಲ್ಲಿಸಿದ್ದೆ. ಈಗಲಾದರೂ ಇಂಥ ಸಂಘಟನೆಗಳನ್ನು ನಿಷೇಧಿಸಬೇಕು~ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆ: `ವಿದ್ಯುತ್ ಸಮಸ್ಯೆ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ~ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.