ಶನಿವಾರ, ಏಪ್ರಿಲ್ 17, 2021
22 °C

ಸಂಘಟಿತರಾಗಲು ಕನ್ನಡಿಗರಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿನಗರ: `ನೆಲ, ಜಲ, ಭಾಷೆ, ಸಂಸ್ಕೃತಿ ವಿಷಯದಲ್ಲಿ ಕನ್ನಡಿಗರು ಸಂಘಟಿತರಾಗಿ ಕನ್ನಡ ನಾಡನ್ನು ರಕ್ಷಿಸಲು ಮುಂದಾಗಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆ ಸಾರ್ಥಕವಾಗುತ್ತದೆ~ ಎಂದು ಕಾಂಗ್ರೆಸ್ ರಾಜರಾಜೇಶ್ವರಿನಗರ ಕ್ಷೇತ್ರ ಘಟಕದ ಅಧ್ಯಕ್ಷ ಎಂ.ರಾಜ್‌ಕುಮಾರ್ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ಗುರುವಾರ ನಡೆದ ರಾಜ್ಯೋತ್ಸವ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಬಡವರಿಗೆ ಬಟ್ಟೆ ವಿತರಣೆ ಹಾಗೂ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ಸಹಾಯ ನೀಡಿ ಅವರು ಮಾತನಾಡಿದರು.ವಾರ್ಡ್ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ವಿವಿಧ ಘಟಕಗಳ ಅಧ್ಯಕ್ಷರಾದ ಚಂದ್ರು, ಅರುಣ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.