ಚನ್ನಗಿರಿ: ಎಲ್ಲ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿ ಸಾಧಿಸಲು ನೇಕಾರ ಸಮಾಜದವರು ಸಂಘಟಿ ತರಾಗಬೇಕಾದ ಅಗತ್ಯವಿದೆ ಎಂದು ಮಾಜಿ ಸಂಸತ್ ಸದಸ್ಯ, ನೇಕಾರ ಸಂಘದ ಗೌರವಾಧ್ಯಕ್ಷ ಕೆ.ಸಿ. ಕೊಂಡಯ್ಯ ಕರೆ ನೀಡಿದರು.

ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲಾ ಆವರಣದಲ್ಲಿ ಶುಕ್ರವಾರ ನಡೆದ ತಾಲ್ಲೂಕುಮಟ್ಟದ ನೇಕಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಈ ಜನಾಂಗದವರು 70 ಲಕ್ಷದಷ್ಟು ಇದ್ದಾರೆ. ರಾಜಕೀಯ ಹೊರತುಪಡಿಸಿ ಜನಾಂಗದ ಪ್ರಗತಿ ನಾವು ಮಾಡಬೇಕಾಗಿದೆ ಎಂದು ಹೇಳಿದರು.

ರಾಜ್ಯ ಕೈಮಗ್ಗ ಅಭಿವೃದ್ಧಿ ಮಂಡಳಿ ಹಾಗೂ ನೇಕಾರರ ಒಕ್ಕೂಟದ ಅಧ್ಯಕ್ಷ ಎಂ.ಡಿ. ಲಕ್ಷ್ಮೀನಾರಾಯಣ್ ಮಾತನಾಡಿ, ಎಲ್ಲಾ ತಾಲ್ಲೂಕುಗಳಲ್ಲಿ ಈ ಸಮಾಜದ ಸಮುದಾಯ ಭವನಗಳನ್ನು ನಿರ್ಮಿಸಲು ್ಙ 50 ಕೋಟಿ ಅನುದಾನ ಸರ್ಕಾರ ನೀಡಿದೆ. ಮುಂದಿನ ದಿನಗಳಲ್ಲಿ ಸಮುದಾಯ ಭವನ ನಿರ್ಮಿಸಲಾಗುವುದು ಎಂದು ಹೇಳಿದರು.

ದೊಡ್ಡಬಳ್ಳಾಪುರದ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ, ಹರಿಹರದ ಪ್ರಭುಲಿಂಗ ಸ್ವಾಮೀಜಿ, ಗುಳೇದಗುಡ್ಡದ ಬಸವರಾಜ ಪಟ್ಟಾದಾರ್ಯ ಸ್ವಾಮೀಜಿ, ಚನ್ನಗಿರಿಯ ಜಯದೇವ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಸಂಸತ್ ಸದಸ್ಯ ಜಿ.ಎಂ. ಸಿದ್ದೇಶ್ವರ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಮಾಜಿ ಶಾಸಕ ಮಹಿಮ ಜೆ. ಪಟೇಲ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹೊದಿಗೆರೆ ರಮೇಶ್, ಜಿಲ್ಲಾ ಪಂಚಾಯ್ತಿ ಸದಸ್ಯೆ ಪ್ರೇಮಾ ಸಿದ್ದೇಶ್, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಪುಷ್ಪಲತಾ, ಪಟ್ಟಸಾಲಿ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಶಿವಪ್ಪ ಶೆಟ್ರು, ದೇವಾನಂದ, ಸೂರ್ಯನಾರಾಯಣ್, ಎ.ಎಸ್. ಬಸವರಾಜ್, ಟಿ.ಆರ್. ಭೋಜರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.