ಮಂಗಳವಾರ, ಜುಲೈ 14, 2020
24 °C

ಸಂಘ-ಸಂಸ್ಥೆ ಸಮಾಜಮುಖಿ ಆಗಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಂಘ-ಸಂಸ್ಥೆ ಸಮಾಜಮುಖಿ ಆಗಿರಲಿ

ಹೊಸದುರ್ಗ: ಸಂಘ-ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಕಾಗಿನೆಲೆ ಮಹಾಸಂಸ್ಥಾನ ಮಠದ ನಿರಂಜನಾ ನಂದಪುರಿ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಕೆಲ್ಲೋಡು ವೇದಾವತಿ ನದಿತೀರದಲ್ಲಿರುವ ಕನಕ ಗುರುಪೀಠದ ಜಮೀನಿನಲ್ಲಿ ಸೋಮವಾರ ಏರ್ಪಡಿಸಿದ್ದ ಕನಕ ಪತ್ತಿನ ಸಹಕಾರ ಸಂಘದ ಭೂಮಿಪೂಜೆ ಹಾಗೂ ಸನ್ಮಾನ ಸಮಾರಂಭದ ನೇತೃತ್ವ ವಹಿಸಿ ಅವರು ಮಾತನಾಡಿದರು.ಸಹಕಾರಿ ಸಂಘಗಳು ಸದಸ್ಯರ ಅಭ್ಯುದಯಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಸಂಘಗಳು ಹಣಕಾಸು ವಹಿವಾಟಿಗಷ್ಟೇ ಸೀಮಿತವಾಗದೆ ಸೇವಾ ಕಾರ್ಯಕ್ರಮಗಳನ್ನು ಕೈಗೊಂಡು ಸಮಾಜದ ಉನ್ನತಿಗೆ ಪ್ರಾಮಾಣಿಕವಾಗಿ ದುಡಿಯಬೇಕು ಎಂದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಎಚ್.ಎಂ. ರೇವಣ್ಣ, ಯಾವುದೇ ಸಹಕಾರಿ ಸಂಸ್ಥೆಗಳು ಯಶಸ್ಸು ಕಾಣಬೇಕಾದರೆ ಎಲ್ಲರ ವಿಶ್ವಾಸಗಳಿಸಬೇಕು. ಸಹಕಾರಿ ತತ್ವಗಳನ್ನು ಪ್ರಾಮಾಣಿಕವಾಗಿ ಪಾಲಿಸಿ ಸದಸ್ಯರನ್ನು ಪ್ರಗತಿಯತ್ತ ಕೊಂಡೊಯ್ಯಬೇಕು ಎಂದು ಸಲಹೆ ಮಾಡಿದರು.

ಕನಕ ಗುರುಪೀಠ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ಕೆಲ್ಲೋಡು ನದಿತೀರದಲ್ಲಿರುವ ಶ್ರೀಮಠದ ಜಮೀನಿನಲ್ಲಿ ಮಠ ನಿರ್ಮಾಣದ ಜತೆಗೆ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಯೋಜನೆ ಹೊಂದಲಾಗಿದೆ ಎಂದು ತಿಳಿಸಿದರು.ಬಿಬಿಎಂಪಿ ವಿರೋಧ ಪಕ್ಷದ ನಾಯಕ ನಾಗರಾಜ್ ರಾಷ್ಟ್ರೀಯ ಸಹಕಾರಿ ಪಿತಾಮಹ ಸಿದ್ದನಗೌಡ ಎಸ್. ಪಾಟೀಲ ಅವರ ಭಾವಚಿತ್ರ ಅನಾವರಣಗೊಳಿಸಿದರು.

ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಚಂದ್ರಪ್ಪ, ಪತ್ರಕರ್ತ ನಾಗಣ್ಣ, ಜಿ.ಪಂ. ಸದಸ್ಯೆ ಅನಿತಾ ಬಸವರಾಜು, ತಾ.ಪಂ. ಸದಸ್ಯ ಹನುಮಂತಪ್ಪ, ಪುರಸಭೆ ಸದಸ್ಯ ಆಗ್ರೋ ಶಿವಣ್ಣ ಉಪಸ್ಥಿತರಿದ್ದರು.ಕನಕ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಕಾಗಿನೆಲೆ ಮಠದ ಶ್ರೀಗಳ ನೇತೃತ್ವದಲ್ಲಿ ಭೂಮಿ ಪೂಜೆ ನೆರವೇರಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.