ಸಂಚಾರ ನಿಯಮ ಉಲ್ಲಂಘನೆ;ರೂ. 11.40 ಲಕ್ಷ ದಂಡ ವಸೂಲಿ

7

ಸಂಚಾರ ನಿಯಮ ಉಲ್ಲಂಘನೆ;ರೂ. 11.40 ಲಕ್ಷ ದಂಡ ವಸೂಲಿ

Published:
Updated:

ಬೆಂಗಳೂರು: ನಗರದಾದ್ಯಂತ ಶುಕ್ರವಾರ ಬೆಳಿಗ್ಗೆ ಎರಡು ಗಂಟೆ ಕಾಲ ವಿಶೇಷ ಕಾರ್ಯಚರಣೆ ನಡೆಸಿದ ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಮಾಡಿದ 10,500 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, 11.40 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.`ನಸುಕಿನ ವೇಳೆ ಸಂಚಾರಿ ಪೊಲೀಸರು ಇರುವುದಿಲ್ಲ ಎಂದು ಭಾವಿಸಿ ವಾಹನ ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಆದ್ದರಿಂದ ವಾಹನ ಚಾಲಕರಿಗೆ ಎಚ್ಚರಿಕೆ ನೀಡುವ ಸಲುವಾಗಿ ಬೆಳಿಗ್ಗೆ 6 ಗಂಟೆಯಿಂದ 8ರವರೆಗೆ ಕಾರ್ಯಾಚರಣೆ ನಡೆಸಲಾಯಿತು~ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ.ಸಲೀಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry