ಶನಿವಾರ, ಮೇ 15, 2021
22 °C

ಸಂಚಾರ ನಿಯಮ ಉಲ್ಲಂಘನೆ: 1,317 ಡಿ.ಎಲ್ ಮುಟ್ಟುಗೋಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ನಗರದ ವಿವಿಧೆಡೆ 2012ರ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ದೂರು ದಾಖಲಿಸಿ 1,317 ಚಾಲನಾ ಪರವಾನಗಿಗಳನ್ನು (ಡಿ.ಎಲ್) ಮುಟ್ಟುಗೋಲು ಹಾಕಿಕೊಂಡಿದ್ದಾರೆ.`ಮುಟ್ಟಗೋಲು ಹಾಕಿಕೊಂಡಿರುವ ಚಾಲನಾ ಪರವಾನಗಿಗಳನ್ನು ಪ್ರಾದೇಶಿಕ ಸಾರಿಗೆ (ಆರ್‌ಟಿಓ) ಕಚೇರಿಗಳಿಗೆ ಕಳುಹಿಸಿಕೊಡಲಾಗಿದೆ. ಅಲ್ಲದೇ ಆ ಚಾಲನಾ ಪರವಾನಗಿಗಳನ್ನು ರದ್ದುಪಡಿಸುವಂತೆ ಆರ್‌ಟಿಓಗಳಿಗೆ ಸೂಚಿಸಲಾಗಿದೆ~ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ.ಸಲೀಂ `ಪ್ರಜಾವಾಣಿ~ಗೆ ತಿಳಿಸಿದರು.`2011ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಇದೇ ರೀತಿ ನಗರದ ಹಲವೆಡೆ ಕಾರ್ಯಾಚರಣೆ ನಡೆಸಿ ಸಂಚಾರ ನಿಯಮ ಉಲ್ಲಂಘಿಸಿದ 844 ವಾಹನ ಸವಾರರ ಚಾಲನಾ ಪರವಾನಗಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು~ ಎಂದು ಅವರು ಹೇಳಿದರು.ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಮುಂದಿನ ದಿನಗಳಲ್ಲೂ ದೂರು ದಾಖಲಿಸಿ ಅವರ ಚಾಲನಾ ಪರವಾನಗಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.