ಸೋಮವಾರ, ಮೇ 23, 2022
30 °C

ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಶಾಲಾ ವಾಹನಗಳ ಚಾಲಕರು ಹೆಚ್ಚು ಜಾಗರೂಕತೆ ವಹಿಸಬೇಕು. ಮಕ್ಕಳನ್ನು ಸುರಕ್ಷಿತವಾಗಿ ಶಾಲೆಗೆ ಕರೆತರುವ ಮತ್ತು ಮನೆಗೆ ಬಿಟ್ಟು ಬರುವ ಜವಾಬ್ದಾರಿ ಇರುತ್ತದೆ. ಅವರು ಅದನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಎಸ್.ಮಹೇಶ್‌ಕುಮಾರ್ ಸಲಹೆ ಮಾಡಿದರು.ಸಂಚಾರ ನಿಯಮಗಳ ಕುರಿತು ಶಾಲಾ ವಾಹನ ಚಾಲಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ನಂದಿ ರಂಗಮಂದಿರದ ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಾಲಕರ ಮೇಲೆ ನಂಬಿಕೆಯಿಟ್ಟು ಪೋಷಕರು ಮಕ್ಕಳನ್ನು ಕಳುಹಿಸುತ್ತಾರೆ. ಚಾಲಕರು ಜಾಗರೂಕತೆಯಿಂದ ವಾಹನ ಚಾಲನೆ ಮಾಡಬೇಕು ಎಂದರು.ವಾಹನ ಚಾಲಕರನ್ನು ಆಯ್ಕೆ ಮಾಡಿಕೊಳ್ಳುವಾಗ ಶಾಲಾ ಆಡಳಿತ ಮಂಡಳಿ ಪ್ರತಿಯೊಂದು ವಿಷಯದ ಬಗ್ಗೆ ನಿಗಾ ವಹಿಸಬೇಕು. ಚಾಲನಾ ಪರವಾನಗಿ ಹೊಂದಿದ್ದಾರೆಯೇ? ಅವರ ವ್ಯಕ್ತಿತ್ವ ಎಂಥದ್ದು  ಎಂಬ ಬಗ್ಗೆ ಗಮನಹರಿಸಬೇಕು ಎಂದು ಅವರು ತಿಳಿಸಿದರು.ಶಾಲಾ ವಾಹನ ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸಬಾರದು. ನಿಗದಿತ ಸೀಟುಗಳಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಕೂರಿಸಿಕೊಳ್ಳಬಾರದು. ವೇಗವಾಗಿ ಚಾಲನೆ ಮಾಡಬಾರದು ಎಂದು ಅವರು ತಿಳಿಸಿದರು.ಪೋಷಕರು ಮತ್ತು ಮಕ್ಕಳೊಂದಿಗೆ ಸರಿಯಾಗಿ ವರ್ತಿಸಬೇಕು. ಮಕ್ಕಳನ್ನು ಮನೆಗೆ ತಲುಪಿಸಲು ವಿಳಂಬವಾದಲ್ಲಿ ಅಥವಾ ಬೇರೆ ಏನಾದರೂ ಸಮಸ್ಯೆಯಾದಲ್ಲಿ ಪೋಷಕರಿಗೆ ತಕ್ಷಣವೇ ವಿಷಯ ಮುಟ್ಟಿಸಬೇಕು ಎಂದು ಅವರು ಹೇಳಿದರು. ಪ್ರೊಬೇಷನರಿ ಡಿವೈಎಸ್ಪಿ ಲಾವಣ್ಯಾ, ನಗರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ವಸಂತ್, ಸಂಚಾರ ಠಾಣೆ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್, ಸರ್ಕಲ್ ಇನ್ಸ್‌ಪೆಕ್ಟರ್ ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.