ಸಂಚಾರ ನಿಯಮ ತಪ್ಪಿದರೆ: ಕಠಿಣ ಕ್ರಮ

7

ಸಂಚಾರ ನಿಯಮ ತಪ್ಪಿದರೆ: ಕಠಿಣ ಕ್ರಮ

Published:
Updated:

ಚಿಕ್ಕಬಳ್ಳಾಪುರ: ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಮುಂದುವರೆಸಿರುವ ಸಂಚಾರ ಪೊಲೀಸರು ತಪ್ಪಿತಸ್ಥರಿಗೆ ದಂಡ ವಿಧಿಸುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಮತ್ತು ವೃತ್ತಗಳಲ್ಲಿ ನಿಗಾ ವಹಿಸುತ್ತಿರುವ ಪೊಲೀಸರು ಸಂಚಾರ ನಿಯಮಗಳನ್ನು ಉಲ್ಲಂಘಿಸುತ್ತಿರುವ ವಾಹನ ಚಾಲಕರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.ನಗರದ ಶಿಡ್ಲಘಟ್ಟ ವೃತ್ತ, ಸರ್ ಎಂ.ವಿಶ್ವೇಶ್ವರಯ್ಯ ವೃತ್ತ, ಜೂನಿಯರ್ ಕಾಲೇಜು ಬಳಿ, ಪ್ರಥಮ ದರ್ಜೆ ಕಾಲೇಜು ಬಳಿ ಮುಂತಾದ ಕಡೆ ತಪಾಸಣೆ ಮಾಡುತ್ತಿರುವ ಪೊಲೀಸರು ಸ್ಥಳದಲ್ಲೇ ದಂಡ ವಿಧಿಸುತ್ತಿದ್ದಾರೆ. ಚಾಲನಾ ಪರವಾನಗಿ ಇಲ್ಲದಿರುವುದು, ದ್ವಿಚಕ್ರ ವಾಹನದಲ್ಲಿ ಮೂವರ ಸವಾರಿ, ಚಾಲನೆ ವೇಳೆಯಲ್ಲಿ ಮೊಬೈಲ್ ಫೋನ್ ಬಳಕೆ ಮುಂತಾದವುಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ.‘ಬಹುತೇಕ ಚಾಲಕರ ಬಳಿ ಚಾಲನಾ ಪರವಾನಗಿ ಇಲ್ಲ.ದ್ವಿಚಕ್ರ ವಾಹನದಲ್ಲಿ ಮೂವರು ಸವಾರಿ ಮಾಡುವುದು ಮತ್ತು ಮೊಬೈಲ್ ಫೋನ್ ಬಳಕೆ ಮಾಡುವ ಪ್ರಕರಣಗಳು ಹೆಚ್ಚು ಕಂಡು ಬರುತ್ತಿವೆ. ಸ್ಥಳದಲ್ಲೇ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರಿಗೆ ದಂಡ ವಿಧಿಸುತ್ತೇವೆ. ದಿನಕ್ಕೆ 3 ಸಾವಿರದಿಂದ 5 ಸಾವಿರ ರೂಪಾಯಿವರೆಗೆ ದಂಡ ವಸೂಲಿ ಮಾಡುತ್ತೇವೆ’ ಎಂದು ಸಂಚಾರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಯಾಜ್ ಬೇಗ್ ‘ಪ್ರಜಾವಾಣಿ’ಗೆ ತಿಳಿಸಿದರು.ಸಂಚಾರ ನಿಯಮ ಉಲ್ಲಂಘನೆ ತಡೆಯಲು  ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದೇವೆ. ಈ ನಡುವೆಯೂ ಚಾಲಕರು ನಿರ್ಲಕ್ಷ್ಯ ತೋರುವುದನ್ನು ಮುಂದುವರೆಸಿದ್ದಲ್ಲಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry