ಸಂಚು: ಕೇಂದ್ರ ಎಚ್ಚರಿಕೆ

7

ಸಂಚು: ಕೇಂದ್ರ ಎಚ್ಚರಿಕೆ

Published:
Updated:

ನವದೆಹಲಿ, (ಪಿಟಿಐ): ಹರಿಯಾಣದ ಅಂಬಾಲ ರೈಲು ನಿಲ್ದಾಣದ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆಯಾದ ಹಿನ್ನೆಲೆಯಲ್ಲಿ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಬೆಂಗಳೂರು, ಹೈದರಾಬಾದ್ ಜೊತೆಗೆ ನಾಲ್ಕು ಮೆಟ್ರೊ ನಗರಗಳ ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಎಚ್ಚರಿಸಿದೆ.ಹಬ್ಬಗಳ ಸಂಭ್ರಮಕ್ಕೆ ವಿಘ್ನ ಒಡ್ಡಲು ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಕುರಿತು ಬೇಹುಗಾರಿಕಾ ಮಾಹಿತಿ ಆಧರಿಸಿ ದೆಹಲಿ, ಮುಂಬೈ, ಕೋಲ್ಕತ್ತ, ಚೆನ್ನೈ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಮಾರುಕಟ್ಟೆ, ವಿಮಾನ ನಿಲ್ದಾಣ, ರೈಲು ನಿಲ್ದಾಣದಂತಹ ಜನದಟ್ಟಣೆ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯುಕ್ತಿಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry