ಸಂಜೀವ್ ಭಟ್ ಅರ್ಜಿ ವಾಪಸ್

7

ಸಂಜೀವ್ ಭಟ್ ಅರ್ಜಿ ವಾಪಸ್

Published:
Updated:

ನವದೆಹಲಿ (ಪಿಟಿಐ): 1990ರಲ್ಲಿ ಪೊಲೀಸ್ ದೌರ್ಜನ್ಯದಿಂದ ಒಬ್ಬ ವ್ಯಕ್ತಿ ಸತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂಡಲಾಗಿರುವ ಕ್ರಿಮಿನಲ್ ಮೊಕದ್ದಮೆಗೆ ತಡೆಯಾಜ್ಞೆ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಅಮಾನತಿನಲ್ಲಿರುವ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸುಪ್ರೀಂಕೋರ್ಟ್‌ನಿಂದ ವಾಪಸ್ ಪಡೆದಿದ್ದಾರೆ.

ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಉದ್ದೇಶಿಸಿರುವುದರಿಂದ ತಡೆಯಾಜ್ಞೆಗೆ ಮಾಡಿದ ಮನವಿಯನ್ನು ವಾಪಸ್ ಪಡೆಯಲಾಗುತ್ತಿದೆ ಎಂದು ಭಟ್ ಪರ ವಕೀಲರು ತಿಳಿಸಿದಾಗ ನ್ಯಾಯಮೂರ್ತಿ ಬಿ.ಎಸ್. ಚವಾಣ್ ಅದಕ್ಕೆ ಒಪ್ಪಿಗೆ ಸೂಚಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry