ಸಂಜೀವ್ ಭಟ್ ಬಂಧನ ಖಂಡಿಸಿ ಪ್ರತಿಭಟನೆ

7

ಸಂಜೀವ್ ಭಟ್ ಬಂಧನ ಖಂಡಿಸಿ ಪ್ರತಿಭಟನೆ

Published:
Updated:

ಚಾಮರಾಜನಗರ: ಗೋಧ್ರಾ ನಂತರದ ಗಲಭೆ ಸಂಬಂಧ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿರುವ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಬಂಧಿಸಿರುವ ಗುಜರಾತ್ ಸರ್ಕಾರದ ಕ್ರಮ ಖಂಡಿಸಿ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಸೋಮವಾರ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನರೇಂದ್ರ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. ಭಟ್ ಅವರ ಮೇಲೆ ಹೂಡಿರುವ ಮೊಕದ್ದಮೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.ಹಿರಿಯ ಪೊಲೀಸ್ ಅಧಿಕಾರಿಯಾದ ಸಂಜೀವ್ ಭಟ್ ಅವರು ಸತ್ಯ ಹೇಳಿದ್ದಾರೆ. ಆದರೆ, ಈ ಬಗ್ಗೆ ಸಹಿಸದ ಮೋದಿ ಅವರು ಕಾನೂನು ಕ್ರಮಕ್ಕೆ ಮುಂದಾಗಿರುವುದು ಸರಿಯಲ್ಲ. ಭಟ್ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. ಈ ವಿಷಯ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಹಂತದಲ್ಲಿಯೇ ಭಟ್ ಅವರನ್ನು ಉದ್ದೇಶಪೂರ್ವವಾಗಿ ಬಂಧಿಸಲಾಗಿದೆ ಎಂದು ದೂರಿದರು.ಮುಖಂಡರಾದ ಮುಜಾಮಿಲ್ ಅಹಮ್ಮದ್, ಜಬೀಉಲ್ಲಾ, ಸೈಯದ್ ಜುಲ್ಫೀ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ರಾರ್ ಅಹಮ್ಮದ್, ಡಿಎಸ್‌ಎಸ್‌ನ ಸಂಘೀನ, ಆಲೂರು ನಾಗೇಂದ್ರ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry