ಗುರುವಾರ , ಮೇ 6, 2021
23 °C

ಸಂಜೀವ್ ಭಟ್ ವಿಚಾರಣೆಗೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ ವಿಚಾರಣೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ.ಗಲಭೆ ಸಂದರ್ಭದಲ್ಲಿ ಅಲ್ಲಿನ ರಾಜ್ಯ ಸರ್ಕಾರ ನಿಷ್ಕ್ರಿಯವಾಗಿತ್ತು ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ಮುಂದೆ ತಪ್ಪು ಹೇಳಿಕೆ ನೀಡುವಂತೆ ತಮ್ಮ ಚಾಲಕನ ಮೇಲೆ ಒತ್ತಡ ಹೇರಿದ ಆರೋಪ ಭಟ್ ಮೇಲಿದೆ.ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಇದು ರಾಜಕೀಯ ಪ್ರೇರಿತ ಎಂದು ಭಟ್ ಅವರು ಕೋರ್ಟ್‌ಗೆ ತಿಳಿಸಿದ ಹಿನ್ನೆಲೆಯಲ್ಲಿ,  ನ್ಯಾಯಮೂರ್ತಿಗಳಾದ ಅಫ್ತಾಬ್ ಆಲಂ ಹಾಗೂ ರಂಜನಾ ದೇಸಾಯಿ ಅವರನ್ನು ಒಳಗೊಂಡ ನ್ಯಾಯ ಪೀಠವು ಈ ವಿಚಾರಣೆಗೆ ತಡೆ ನೀಡಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.