ಶುಕ್ರವಾರ, ಮೇ 7, 2021
24 °C

ಸಂಜೆಗೆ ಮೋದಿ ಉಪವಾಸ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

ಅಹಮದಾಬಾದ್ (ಪಿಟಿಐ): ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಇಲ್ಲಿನ ಗುಜರಾತ್ ವಿಶ್ವವಿದ್ಯಾಲಯದ ಸಭಾ ಭವನದಲ್ಲಿ ಕೈಗೊಂಡಿರುವ 72 ಗಂಟೆಗಳ `ಸದ್ಭಾವನಾ ಉಪವಾಸ~ ಸೋಮವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು,  ಸಂಜೆ 5.30 ರ ವೇಳೆಗೆ ಅವರು ತಮ್ಮ ಉಪವಾಸವನ್ನು ಮುಕ್ತಾಯಗೊಳಿಸಲಿದ್ದಾರೆ.

ಮೋದಿ ತಮ್ಮ `ಸದ್ಭಾವನಾ ಉಪವಾಸ~ ಅಂತ್ಯ ಗೊಳಿಸುವ ಸಮಯದಲ್ಲಿ  ಗುಜರಾತ್ ವಿಶ್ವವಿದ್ಯಾಲಯದ ಸಭಾ ಭವನಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಸೇರಿದಂತೆ ಸಂಸದರಾದ ವೆಂಕಯ್ಯ ನಾಯ್ಡು, ಹೇಮಾ ಮಾಲಿನಿ, ಪಕ್ಷದ ರಾಷ್ಟ್ರೀಯ ವಕ್ತಾರ ನಿರ್ಮಾಲ ಸೀತಾರಾಮನ್ ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಗುಜರಾತ್ ವಿಶ್ವವಿದ್ಯಾಲಯದ ಸಭಾ ಭವನದಲ್ಲಿ ಸೋಮವಾರ ಬೆಳಿಗ್ಗೆ, ಮೋದಿ ಹಾಗೂ ಅಲ್ಲಿ ನೆರೆದಿದ್ದ ಜನರು ಭಾನುವಾರ ಸಿಕ್ಕಿಂ, ಮ್ಯಾಂಗಾನ್ ಮತ್ತು ಸಾಕ್ಯೋಂಗ್ ಸೇರಿದಂತೆ ಉತ್ತರ ಮತ್ತು ಈಶಾನ್ಯ ಭಾಗದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮಡಿದವರ ಗೌರವಾರ್ಥ ಒಂದು ನಿಮಿಷ ಮೌನವನ್ನು ಆಚರಿಸಿದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.