ಸಂತೆ ಮೈದಾನದಲ್ಲಿ ಮೂಲ ಸೌಕರ್ಯಕ್ಕೆ ಆಗ್ರಹ

7

ಸಂತೆ ಮೈದಾನದಲ್ಲಿ ಮೂಲ ಸೌಕರ್ಯಕ್ಕೆ ಆಗ್ರಹ

Published:
Updated:

ಕೃಷ್ಣರಾಜಪುರ:  ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ರೈತರು, ಹಣ್ಣು ಮತ್ತು ತರಕಾರಿ ವ್ಯಾಪಾರಿಗಳು ಬುಧವಾರ ಸ್ಥಳೀಯ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.`ಸಂತೆ ಮೈದಾನದಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಕಲ್ಪಿಸಬೇಕು. ತಂಗುದಾಣ ನಿರ್ಮಿಸಬೇಕು. ಮಳಿಗೆ ಮಾಲೀಕರಿಂದ ಕರ ವಸೂಲಿ ಮಾಡಬೇಕು. ಇಲ್ಲಿನ ಕಸಾಯಿಖಾನೆ ಸ್ಥಳಾಂತರಿಸಬೇಕು. ಬೀದಿ ವ್ಯಾಪಾರಿಗಳಿಗೆ ಸೂಕ್ತ ಸೌಲಭ್ಯ ಒದಗಿಸಬೇಕು~ ಎಂದು ರೈತರು, ಹಣ್ಣು ಮತ್ತು ತರಕಾರಿ ವ್ಯಾಪಾರಿಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಲೆ ವಿ.ಶ್ರೀನಿವಾಸ್ ಆಗ್ರಹಿಸಿದರು.ಬಳಿಕ ಸ್ಥಳಕ್ಕೆ ಆಗಮಿಸಿದ ಮಹದೇವಪುರ ವಲಯದ ಜಂಟಿ ಆಯುಕ್ತ ಕೆ.ಎನ್.ದೇವರಾಜ್ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.`ವ್ಯಾಪಾರಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಈ ಪ್ರದೇಶದಲ್ಲಿ 1.73 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಲು ಮುಂದಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೇ ಕೆಲಸ ಆರಂಭವಾಗಲಿದೆ~ ಎಂದು ಜಂಟಿ ಆಯುಕ್ತರು ತಿಳಿಸಿದರು.ವರದಿ ಬಂದ ಬಳಿಕ ಕ್ರಮ:


`ಕಲ್ಕೆರೆ ಗ್ರಾಮದ ಕಲ್ಯಾಣಿಯಲ್ಲಿ ಮೀನುಗಳು ಸಾವನಪ್ಪಿರುವ ಘಟನೆಗೆ ಸಂಬಂಧಪಟ್ಟಂತೆ ಪರಿಶೀಲನೆ ಕಾರ್ಯ ಮುಂದುವರಿದಿದೆ.ಈಗಾಗಲೇ ಪರಿಸರ ಘಟಕದ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೆರೆಯ ನೀರು ಮತ್ತು ಸತ್ತ ಮೀನುಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು~ ಎಂದು ಅವರು ಪ್ರತಿಕ್ರಿಯೆ ನೀಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry