ನವದೆಹಲಿ (ಪಿಟಿಐ): ಪ್ರವಾಹ ಪೀಡಿತ ಉತ್ತರಾಖಂಡದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರಯಾಣಿಕರಿಗೆ ಏರ್ ಇಂಡಿಯಾ ಶುಕ್ರವಾರ ರಿಯಾಯಿತಿ ದರಗಳನ್ನು ಪ್ರಕಟಿಸಿದೆ.

ಡೆಹ್ರಾಡೂನ್ನಿಂದ ದೇಶದ ಯಾವುದೇ ನಗರಕ್ಕೆ ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸುವ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಮೂಲ ದರದಲ್ಲಿ ಶೇ 50ರಷ್ಟು ರಿಯಾಯಿತಿ ನೀಡುವುದಾಗಿ ಅದು ತಿಳಿಸಿದೆ.

ಇದಲ್ಲದೆ, ಪವನ್ ಹನ್ಸ್ ಹೆಲಿಕಾಪ್ಟರ್ ಸಂಸ್ಥೆಯೊಂದಿಗೆ ಸೇರಿ ಸಂತ್ರಸ್ತರ ಶೋಧನೆ, ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ವಿಶೇಷ ವಿಮಾನಗಳನ್ನು ಏರ್ ಇಂಡಿಯಾ ನಿಯೋಜಿಸಿದೆ.

ಜೊತೆಗೆ ಏರ್ ಇಂಡಿಯಾದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ (ಸಿಎಂಡಿ) ರೋಹಿತ್ ನಂದನ್ ಸೇರಿದಂತೆ ಉನ್ನತ ಅಧಿಕಾರಿಗಳು ತಮ್ಮ ಒಂದು ದಿನದ ವೇತನವನ್ನು ಸಂತ್ರಸ್ತರಿಗೆ ನೀಡಲು ನಿರ್ಧರಿಸಿದ್ದು, ಇತರ ಸಿಬ್ಬಂದಿಗೂ ಕೊಡುಗೆ ನೀಡುವಂತೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.