ಸೋಮವಾರ, ಜುಲೈ 26, 2021
26 °C

ಸಂತ್ರಸ್ತರಿಗೆ ನೆರವು: ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೈಟ್‌ಫೀಲ್ಡ್: ಉತ್ತರಾಖಂಡದಲ್ಲಿ ಸಂಭವಿಸಿದ ನೆರೆ ಹಾವಳಿಯಿಂದ ತತ್ತರಿಸಿರುವ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಹೆಚ್ಚಿನ ನೆರವು ನೀಡಬೇಕೆಂದು ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಆಗ್ರಹ ಪಡಿಸಿದರು.ಮಹದೇವಪುರ ಬಿಜೆಪಿ ಘಟಕ ಏರ್ಪಡಿಸಿದ್ದ ನೆರೆ ಪರಿಹಾರ ನಿಧಿ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕೇಂದ್ರ ಸರ್ಕಾರ ಮಾತ್ರವಲ್ಲದೆ ರಾಜ್ಯ ಸರ್ಕಾರಗಳು ಮಾನವೀಯ ದೃಷ್ಟಿಯಿಂದ ಸಂತ್ರಸ್ತರಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು. ರಾಜ್ಯದ ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹೆಚ್ಚಿನ ಕಾಳಜಿ ವಹಿಸಿರುವುದು ನೆಮ್ಮದಿಯ ವಿಚಾರ ಎಂದರು.ಮಾರತ್‌ಹಳ್ಳಿ ತುಳಸಿ ಚಿತ್ರ ಮಂದಿರದಿಂದ ಪಾದಯಾತ್ರೆ ಮೂಲಕ ಆರಂಭಿಸಿದ ಅವರು  ಬೆಳ್ಳಂದೂರು,  ದೊಡ್ಡಕನ್ನಲ್ಲಿ, ಗುಂಜೂರು, ವರ್ತೂರು ಸೇರಿದಂತೆ ಕೇತ್ರದ ವಿವಿಧೆಡೆ ನಿಧಿ ಸಂಗ್ರಹ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.