ಸೋಮವಾರ, ಜೂನ್ 14, 2021
21 °C

ಸಂಪಂಗಿ ಪ್ರಕರಣ: ಶೆಟ್ಟರ್ ಸಾಕ್ಷ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಂಚ ಪಡೆದಿರುವ ಆರೋಪ ಹೊತ್ತ ಕೆಜಿಎಫ್ ಶಾಸಕ ವೈ.ಸಂಪಂಗಿ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ಕೋರ್ಟ್‌ಗೆ ಸಚಿವ ಜಗದೀಶ ಶೆಟ್ಟರ್ ಅವರು ಮಂಗಳವಾರ ಹಾಜರಾಗಿ ಸಾಕ್ಷ್ಯ ಹೇಳಿದರು.

2009ರಲ್ಲಿ ಶೆಟ್ಟರ್ ಸ್ಪೀಕರ್ ಆಗಿದ್ದ ಅವಧಿಯಲ್ಲಿ ಸಂಪಂಗಿ ಅವರ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಲೋಕಾಯುಕ್ತ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.

ಕ್ರಿಮಿನಲ್ ಪ್ರಕರಣವೊಂದನ್ನು ಇತ್ಯರ್ಥಪಡಿಸುವ ಸಂಬಂಧ ಉದ್ಯಮಿ ಹುಸೇನ್ ಮೊಯಿನ್ ಫಾರೂಕ್ ಅವರಿಂದ ಲಂಚ ಪಡೆದಿರುವ ಆರೋಪ ಹೊತ್ತ ಪ್ರಕರಣ ಇದಾಗಿದ್ದು, ಇದರ ವಿಚಾರಣೆಯನ್ನು ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ನಡೆಸುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.